ಗುಲ್ಬರ್ಗಾ

ಶೀಘ್ರದಲ್ಲೆ ಉದ್ಯಾನವನದ ಸಂಪೂರ್ಣ ಅಭಿವೃದ್ಧಿ: ವಂಟಿ

Published On :

ಗುಲ್ಬರ್ಗ: ಪ್ರಜ್ಞಾ ಕಾನೂನು ಸಲಹಾ ಸಮಿತಿ ಮತ್ತು ವೀರೇಂದ್ರ ಪಾಟೀಲ್ ನಗರ ಮಹಿಳಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ವೀರೇಂದ್ರ ಪಾಟೀಲ್ ಬಡಾವಣೆಯ ಉದ್ಯಾನವನದಲ್ಲಿ ಸಾಂಸ್ಕೃತಿಕ ಸಮಾಗಮ ಮತ್ತು ಬಡಾವಣೆಯ ಅಭಿವೃದ್ಧಿ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಗುಲ್ಬರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರವಿಕಿರಣ ವಂಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ, ಉದ್ಯಾನವನದ ಸಂಪೂರ್ಣ ಅಭಿವೃದ್ಧಿಯು ಬೇಗನೆ ನಡೆಸಿಕೊಡುವುದಾಗಿ ಹೇಳಿದರು.
ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಸಿದ್ದಲಿಂಗಪ್ಪ ಅವರು 30 ಜನ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಿ, ಕಾರ್ಮಿಕರಿಗಾಗಿ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಡವಾಣೆಯ ಪ್ರಜ್ಞಾವಂತರು ಕಾರ್ಮಿಕರ ಹಿತಕ್ಕಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಇದೊಂದು ಮಾದರಿ ಬಡಾವಣೆಯಾಗಿದೆ ಎಂದು ಹೇಳಿದರು.
ಜಿಪಂ ಸದಸ್ಯ ಶೋಭಾ ಬಾಣಿ ಮಾತನಾಡಿದರು. ಪಾಲಿಕೆ ಮಾಜಿ ಸದಸ್ಯ ಉಮೇಶ ಶೆಟ್ಟಿ, ಸದಸ್ಯ ಆರ್.ಎಸ್. ಪಾಟೀಲ್, ಸಹಾಯಕ ಕಾರ್ಯನಿರ್ವಾಹಕ ನಿಸಾರ್ ಅಹ್ಮದ್, ಹಿರಿಯ ಕಾರ್ಮಿಕ ನಿರೀಕ್ಷಕ ನರಸಿಂಹಾಚಾರ್ಯ ಜೋಶಿ, ಡಾ. ಮೀನಾಕ್ಷಿ ಬಾಳಿ, ಮಹಿಳಾ ಸಂಘಟನೆಯ ಮುಖಂಡರಾದ ಪಾರ್ವತಿ ಮಣ್ಣೂರ, ಅನೀತಾ ಸುಬ್ಬಾರಾವ, ಲತಾ ವಾಘಮಾರೆ, ವಸಂತಾ, ಸುಮಿತ್ರಾ ಕಾಳೆ, ಇಂದುಮತಿ ಗಣಪತರಾವ ಮುಂತಾದವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಮೂರೂ ಸ್ಪರ್ಧೆಗಳಲ್ಲಿ ಅತಿ ಉತ್ಸುಕತೆಯಿಂದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.
ಕಾರ್ಮಿಕರಿಗೆ ಗುರುತಿನ ಚೀಟಿ ಮಾಡಿಸಲು ಶ್ರಮಿಸಿದ ಜನವಾದಿ ಮಹಿಳಾ ಸಂಘಟನೆಯ ಚಂದಮ್ಮ ಗೋಳಾ ಅವರಿಗೆ ಸನ್ಮಾನಿಸಲಾಯಿತು. ಸ್ಪರ್ಧೆಗೆ ನಿರ್ಣಾಯಕರಾಗಿ ಬಂದ ಡಾ. ಶಾಂತಾ ಮಠ, ಡಾ. ಶಾಂತಾ ಭೀಮಶೇನರಾವ, ಶಶಿಕಲಾ ಕಟಕೆ, ಸುಶೀಲಾ ಕಟ್ಟೆ ಅವರನ್ನು ಸನ್ಮಾನಿಸಲಾಯಿತು.
ಬಡಾವಣೆಯ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶೀಲಾ ಅಲಗೂಡಕರ್ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ  ಸ್ವಾಗತಿಸಿದರು. ಲವಿತ್ರಾ ವಸ್ತ್ರದ ಮತ್ತು ಪೂಜಾ ಸುಬ್ಬಾರಾವ ನಿರೂಪಿಸಿದರು. ಕೆ. ನೀಲಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.