ಸ್ಪರ್ಧಾ ಮನೋಭಾವದಿಂದ ಗುರಿ ಸಾಧಿಸಿ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ನ.9
ರಾಜ್ಯ ಕಾನೂನು ವಿಶ್ವವಿದ್ಯಾಲಯ ಆಶ್ರಯದಲ್ಲಿ ಶನಿವಾರ ನಗರದ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಗುಲ್ಬರ್ಗ ವಿಭಾಗದ 2ನೇ ಅಂತರ ಕಾಲೇಜುಗಳ ಯುವಜನೋತ್ಸವಕ್ಕೆ ಚಾಲನೆ ನೀಡಲಾಯಿತು.
ಗುಲ್ಬರ್ಗ ವಿಭಾಗದ ಗುಲ್ಬರ್ಗದ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ, ಶಂಕರಲಾಲ ಲಾಹೋಟಿ ಕಾನೂನು ಮಹಾವಿದ್ಯಾಲಯ, ಸೇಡಂನ ಆರ್.ಎಸ್. ಲಡ್ಡಾ ಕಾನೂನು ಮಹಾವಿದ್ಯಾಲಯ, ರಾಯಚೂರಿನ ಎಸ್ಎಫ್ಎ ಕಾನೂನು ಮಹಾವಿದ್ಯಾಲಯಗಳ ಸುಮಾರು 50 ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಂಡಿದ್ದರು.
ನೃತ್ಯ, ಹಾಡುಗಾರಿಕೆ, ಚರ್ಚಾಗೋಷ್ಠಿ, ಏಕಾಪಾತ್ರಾಭಿನಯ ಮುಂತಾದ ಸ್ಪರ್ಧೆಗಳು ಏರ್ಪಡಿಸಲಾಗಿತ್ತು. ಸ್ಫರ್ಧೆಗಳಲ್ಲಿ ವಿಜೇತರಾದವರು ಅಂತರ ವಿಶ್ವವಿದ್ಯಾಲಯಗಳ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವರು. ಅಲ್ಲಿ ವಿಜೇತರಾದವರು ಅಂತರ ವಿಭಾಗ ವಿಶ್ವವಿದ್ಯಾಲಯಗಳ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. , .ಆರ್. ಸುಬ್ರಮಣ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನಾಂಗ ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಗುರಿ ಸಾಧಿಸಬೇಕು ಎಂದು ಕರೆ ನೀಡಿದರು. ನಿರಂತರ ಪ್ರಯತ್ನದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ. ಸ್ವಾಮಿ ವಿವೇಕಾನಂದ, ಸರ್ವಪಲ್ಲಿ ರಾಧಾಕೃಷ್ಣ ಸೇರಿದಂತೆ ಹಲವು ಮಹಾನ ಸಾಧಕರ ಸಾಧನೆ ಉದಾಹರಿಸಿ ಅವರಂತೆ ಸಾಧಕರಾಗಲು ಸಲಹೆ ನೀಡಿದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಪಿ.ಉಪೇಂದ್ರಚಾರ್, ಡಾ. ಎಸ್.ಚಂದ್ರಶೇಖರ, ಡಾ. ಜಿ.ಬಿ. ಪಾಟೀಲ್, ಸಂಸ್ಥೆ ಕಾರ್ಯದರ್ಶಿ ಮಾರುತಿರಾವ್ ಡಿ. ಮಾಲೆ ಇತರರಿದ್ದರು. ಇದೇ ಸಂದರ್ಭ ಹಿರಿಯ ವಕೀಲರಾದ ಆರ್.ವಿ. ನಾಡಗೌಡ, ವಿಜಯಕುಮಾರ್, ವಿಲಾಸಕುಮಾರ್ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

