ಗುಲ್ಬರ್ಗಾ

'ನೀರಿನ ಸಮಸ್ಯೆ ಶೀಘ್ರ ಬಗೆಹರಿಸಿ'

Published On :

 ಅಫಜಲ್ಪುರ: ತಾಲೂಕಿನ ಚಿನಮಗೇರಾ ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಸುಮಾರು ದಿನಗಳಿಂದ ನೀರಿನ ಸಮಸ್ಯೆ ತಲೆದೋರಿದೆ. ಶೀಘ್ರವೇ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ವಸತಿ ಶಾಲೆಯ ಮೇಲ್ವಿಚಾರಕಿ ಸುನಿತಾ ರಾಠೋಡ ಒತ್ತಾಯಿಸಿದರು.
ಕ್ಷೇತ್ರದ ಶಾಸಕ ಮಾಲಿಕಯ್ಯ ಗುತ್ತೇದಾರ ಅವರಿಗೆ ನೀರಿನ ಸಮಸ್ಯೆ ಕುರಿತು ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಈ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳು ದಿನಾಲು ನೀರಿನ ಸಮಸ್ಯೆಯಿಂದ ಬಳಲುವಂತಾಗಿದೆ ಎಂದರು.
ನೀರಿನ ಅಸಮರ್ಪಕತೆಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುವಂತಾಗಿದೆ. ವಸತಿ ಶಾಲೆಗೆ ಪಕ್ಕದ ಹೊಲದಿಂದ ನೀರು ಹೊತ್ತು ತಂದು ಹಾಕುವ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ಈ ಕುರಿತು ಪರಿಶೀಲಿಸಿ ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಶಾಸಕರಿಗೆ ಒತ್ತಾಯಿಸಿದರು.
ಈ ಕುರಿತು ಶಾಸಕರು ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧೀಕಾರಿ ಚಿತ್ರಶೇಖರ ದೇಗಲಮಡಿ, ಮುಖ್ಯ ಗುರು ಸುಂದರಾ ಬುಳ್ಳಾ, ಸಹ ಶಿಕ್ಷಕಿಯರಾದ ರಂಜಿತಾ ರಡ್ಡಿ, ಗೀತಾ ಹೂಲ್ಲೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.