ಗುಲ್ಬರ್ಗಾ

ಕುರಿಕೋಟಾ ಸೇತುವೆ ನಿರ್ಮಾಣ; ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧಾರ - ಲಿಂಗರಾಜ

Published On :

ಗುಲ್ಬರ್ಗ: ಕುರಿಕೋಟಾ ಹೊಸ ಸೇತುವೆ ನಿರ್ಮಾಣ ಮತ್ತು ಮಹಾಗಾಂವ ತಾಲೂಕು ಕೇಂದ್ರ ರಚನೆಗೆ ಕ್ಷೇತ್ರದ ಶಾಸಕ ಜಿ.ರಾಮಕೃಷ್ಣ ಅವರು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಕರ್ನಾಟಕ ಯುವ ಶಕ್ತಿ ಸೈನ್ಯದ ರಾಜ್ಯಾಧ್ಯಕ್ಷ ಲಿಂಗರಾಜ ಬಿ. ಗುಂಡುರಕರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 218ರ ಕುರಿಕೋಟಾ ಸೇತುವೆ ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಆಗ್ರಹಿಸಿದರು.
ಹಳೆ ಸೇತುವೆ ದುರಗಾಗಿ 6.38 ಲಕ್ಷ ಖರ್ಚು ಮಾಡಲಾಗಿದೆ. ಆದರೆ, ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಯಾವುದೇ ಸಂದರ್ಭದಲ್ಲಿ ಬಿದ್ದು ಹೋಗಬಹುದು ಎಂಬ ಆತಂಕ ಪ್ರಯಾಣಿಕರನ್ನು ಕಾಡುತ್ತಿದೆ. ಆದ್ದರಿಂದ ಸರ್ಕಾರ ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಹೊಸ ಸೇತುವೆ ನಿರ್ಮಾಣಕ್ಕೆ ಮುಂದಾಗಲು ಮನವಿ ಮಾಡಿದರು.
ದುರಸ್ಥಿ ಮಾಡಲಾದ ಹಳೆ ಸೇತುವೆ ಸುಮಾರು 20 ವರ್ಷ ಬಾಳಿಕೆ ಬರುತ್ತೆ. ಈ ಸೇತುವೆ ಮೇಲೆ ಸಾಕಷ್ಟು ತಗ್ಗುಗಳು ಬಿದ್ದಿದ್ದು, ವಾಹನ ಸಂಚಾರವೂ ಕಷ್ಟವಾಗಿದೆ. ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ಶಾಸಕ ಜಿ. ರಾಮಕೃಷ್ಣ ಅವರು ಚುನಾವಣೆ ಸಂದರ್ಭದಲ್ಲಿ ಮಹಾಗಾಂವ ತಾಲೂಕು ಕೇಂದ್ರ ರಚನೆಗೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ವಿಷಯದ ಬಗ್ಗೆ ಅವರು ಚಕಾರವೆತ್ತುತ್ತಿಲ್ಲ. ಈಗಲಾದರೂ ಮಹಾಗಾಂವ ತಾಲೂಕು ಕೇಂದ್ರ ರಚನೆಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿದರು. ಕುರಿಕೋಟಾ ಹೊಸ ಸೇತುವೆ ನಿರ್ಮಾಣ ಮತ್ತು ಮಹಾಗಾಂವ ತಾಲೂಕು ಕೇಂದ್ರ ರಚನೆ ಸಂಬಂಧ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮನವಿಪತ್ರ ಸಲ್ಲಿಸಲಾಗಿದೆ. ಆದರೆ, ಅವರು ಈ ವಿಷಯದ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.