ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಧರಣಿ
ಕನ್ನಡಪ್ರಭ ವಾರ್ತೆ ಚಿಂಚೋಳಿ ನ.12
ಕರ್ನಾಟಕ ಅಕ್ಷರ ದಾಸೋಹ ನೌಕರರು ತಮ್ಮ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಾಲೂಕು ಪಂಚಾಯ್ತಿ ಕಾರ್ಯಾಲಯದ ಮುಂದೆ ಧರಣಿ ನಡೆಸಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ರಾಜ್ಯ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಜಯಶ್ರೀ ದೊಡ್ಮನಿ ಮಾತನಾಡಿ, ರಾಜ್ಯದಲ್ಲಿ 1,03,874 ಅಡುಗೆ ಸಿಬ್ಬಂದಿ 1 ರಿಂದ 10ನೇ ತರಗತಿಯ 69,25,932 ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಸೇವಾ ಸೌಲಭ್ಯಗಳಿಲ್ಲದೆ ಕನಿಷ್ಟ ವೇತನ ಇಲ್ಲದೆ ಉತ್ತಮ ಗುಣಮಟ್ಟದ ಬಿಸಿಯೂಟ ಮಾಡಿ ಉಣಬಡಿಸುತ್ತಿದ್ದಾರೆ ಎಂದರು.
ಕಳೆದ 11 ವರ್ಷಗಳಿಂದ ದುಡಿಯುತ್ತಿರುವ ಬಡ ಮಹಿಳೆಯರ ಬೇಡಿಕೆಗಳಿಗಾಗಿ ಸರ್ಕಾರ ಸ್ಪಂದಿಸಬೇಕೆಂದು ಅನೇಕ ಸಲ ಒತ್ತಾಯಿಸಿದರು ನಮ್ಮ ಬೇಡಿಕೆಗಳ ಬಗ್ಗೆ ಗಮನಹರಿಸಲಿಲ್ಲ. ಆಂಧ್ರ ಮತ್ತು ಕೇರಳ ರಾಜ್ಯಗಳಲ್ಲಿ ಮಧ್ಯಾಹ್ನ ಬಿಸಿಯುಟ ನೌಕರರಿಗೆ ಗೌರವ ಧನ ಹೆಚ್ಚಳವಿದೆ. ನಮ್ಮ ರಾಜ್ಯದಲ್ಲಿ ಗೌರವಧನ ಹೆಚ್ಚಳವಿಲ್ಲ ಎಂದರು.
ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿದ್ದರಿಂದ ರಾಜ್ಯದಲ್ಲಿ 40 ಸಾವಿರ ಮಹಿಳೆಯರು ಕೆಲಸವನ್ನು ಕಳೆದುಕೊಂಡಿದ್ದಾರೆ. ಪ್ರತಿ ತಿಂಗಳು ವೇತನ ಸರಿಯಾಗಿ ನೀಡಬೇಕು, ಅಡುಗೆ ತಯಾರಿಕೆಯಲ್ಲಿ ಅಪಘಾತಗೊಳಗಾದ ಮಹಿಳೆಯರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಸಂಘದ 18 ಬೇಡಿಕೆಗಳ ಮನವಿ ಪತ್ರವನ್ನು ತಾಲೂಕು ಮಧ್ಯಾಹ್ನ ಬಿಸಿಯೂಟ ಸಹಾಯಕ ನಿರ್ದೇಶಕ ಅರ್ಜುನ ದೊಡ್ಡಮನಿ ಅವರಿಗೆ ಸಲ್ಲಿಸಿದರು. ಸಂಘದ ತಾಲೂಕು ಕಾರ್ಯದರ್ಶಿ ವಿಜಯಲಕ್ಷ್ಮಿ ಓಂಕಾರ, ಅನೀತಾ ಚಿಂಚೋಳಿ, ಕಲ್ಪನಾ, ಸಿಪಿಐ ಮುಖಂಡ ಪ್ರದೀಪ ತಿರಲಾಪುರ ಮುಂತಾದವರು ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

