ಗುಲ್ಬರ್ಗಾ

ಮರಳು ಸ್ಥಗಿತದ ವಿರುದ್ಧ ಆಕ್ರೋಶ; ಹೋರಾಟದ ಸಭೆ

Published On :

ಗುಲ್ಬರ್ಗ/ಶಹಾಬಾದ್: ಸರ್ಕಾರ ಮರಳು ಸಾಗಾಣಿಕೆಯನ್ನು ಸ್ಥಗಿತಗೊಳಿಸಿದ್ದರಿಂದ ಕಟ್ಟಡ ಕಾರ್ಮಿಕರು ನಿರುದ್ಯೋಗಿಗಳಾಗಿದ್ದು, ಸರ್ಕಾರ ಕೂಡಲೇ ಮರಳು ಸಾಗಾಣಿಕೆ ಆರಂಭಿಸಲು ಪ್ರಾರಂಭಿಸದಿದ್ದರೆ ಉಗ್ರ ಹೋರಾಟಕ್ಕೆ ಸಿದ್ದ ಎಂದು ಕಟ್ಟಡ ಕಾರ್ಮಿಕರು ಘೋಷಿಸಿದರು.
ಪಟ್ಟಣದ ಕಮಲಿಬಾಬಾ ದರ್ಗಾದಲ್ಲಿ ಕರೆದ ಸೋಷಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ) ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಕರೆದ ಕಟ್ಟಡ ಕಾರ್ಮಿಕರ ಸಭೆಯಲ್ಲಿ ಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ವಾಡಿ ಸಮಿತಿ ಕಾರ್ಯದರ್ಶಿ ವೀರಭದ್ರಪ್ಪ ಆರ್.ಕೆ. ಮಾತನಾಡಿ, ಮರಳು ಸಾಗಾಣಿಕೆ ಸ್ಥಗಿತಗೊಂಡಿದ್ದರಿಂದ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿವೆ. ಕೆಲಸವಿಲ್ಲದ ಕಾರಣ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಕಾರ್ಮಿಕರ ಕೈಯಲ್ಲಿದ್ದ ಕೆಲಸವನ್ನು ಕಸಿದುಕೊಂಡು ಅವರನ್ನು ದಿವಾಳಿ ಎಬ್ಬಿಸಿ, ಅವರ ಜೀವನದೊಂದಿಗೆ ಚಲ್ಲಾಟವಾಡುತ್ತಿದೆ ಎಂದು ದೂರಿದರು.
ಕಟ್ಟಡ ಕಾರ್ಮಿಕರಿಗೆ ಜೀವನ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಸೌಲಭ್ಯ ಒದಗಿಸದೆ ನಿರ್ಲಕ್ಷ ವಹಿಸಿದ್ದು, ಸರ್ಕಾರದ ಈ ಕ್ರಮವನ್ನು ಖಂಡಿಸಿ ಒಗ್ಗಟ್ಟಾಗಿ ಹೋರಾಟ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಎಸ್ಯುಸಿಐ ಸದಸ್ಯ ವಿಠ್ಠಲ್ ರಾಠೋಡ, ಕಟ್ಟಡ ಕಾರ್ಮಿಕರಾದ ಶಿವಾಜಿ ಪವಾರ, ಸೂರ್ಯಕಾಂತ ರಾಠೋಡ, ಮಹೇಬೂಬ್ ಸಾಬ್, ಪುರಂದಾಸ ರೆಡ್ಡಿ, ಸಿದ್ದಪ್ಪ ಬಾಚವಾರ, ಶಂಕರ ಭಂಡಾರಿ, ರಾಮರಾವ ಪವಾರ, ಗುರುಲಿಂಗಪ್ಪ ಮಿಸ್ತ್ರೀ, ಬಾಬು ಪಟೇಲ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.