ಗುಲ್ಬರ್ಗಾ

ವಿಟಿಎನ್ ಸ್ಟುಡಿಯೋ: ಡಾ. ಜತ್ತಿ ಪುತ್ಥಳಿ ಸ್ಥಾಪನೆ

Published On :

ಗುಲ್ಬರ್ಗ: ಇಲ್ಲಿನ ಜಯನಗರದಲ್ಲಿರುವ ಅನುಭವ ಮಂಟಪದಲ್ಲಿ ಭಾರತದ ಹಂಗಾಮಿ ರಾಷ್ಟ್ರಪತಿಗಳಾಗಿದ್ದ ದಿ. ಬಿ.ಡಿ. ಜತ್ತಿಯವರ ಕಂಚಿನ ಪುತ್ಥಳಿಯನ್ನು ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಖ್ಯಾತ ಲೋಹ ಶಿಲ್ಪಿ ವಿಶ್ವೇಶ್ವರಯ್ಯ ಟಿ.ಎನ್. ಅವರು ತಮ್ಮ ವಿಟಿಎನ್ ಸ್ಟುಡಿಯೋದಲ್ಲಿ ಪುತ್ಥಳಿಯ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ.ಪುತ್ಥಳಿಗೆ ಅಂತಿಮ ರೂಪ ನೀಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಜಿಲ್ಲಾ ಬಸವ ಸಮಿತಿಯ ಅಧ್ಕಕ್ಷೆ ಡಾ. ವಿಲಾಸವತಿ ಖೂಬಾ ಅವರು ಸ್ಟುಡಿಯೋಕ್ಕೆ ಭೇಟಿ ನೀಡಿ, ಪುತ್ಥಳಿ ನಿರ್ಮಾಣ ಕಾರ್ಯದ ಪ್ರಗತಿ ಕುರಿತು ಪರಿಶೀಲಿಸಿದ್ದಾರೆ.
23ರಂದು  ಸರ್ಕಾರಿ ನೌಕರರ ಕ್ರೀಡಾಕೂಟ
ಗುಲ್ಬರ್ಗ: ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನ.23 ರಂದು ಬೆಳಗ್ಗೆ 9.30ಕ್ಕೆ ಪೊಲೀಸ್ ಪರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಹೆಸರು ಪದನಾಮದೊಂದಿಗೆ ಮೇಲಾಧಿಕಾರಿಗಳ ಸಹಿಯೊಂದಿಗೆ ನ.20 ಒಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ಗುಲ್ಬರ್ಗ ಇವರಿಗೆ ಸಲ್ಲಿಸಲು ಕೋರಲಾಗಿದೆ. ಈ ಕ್ರೀಡಾಕೂಟದಲ್ಲಿ ಪುರಷರಿಗೆ 45 ವರ್ಷ ವಯೋವುತಿ ಒಳಗಿನ ಹಾಗೂ 45ವರ್ಷ ಮೀರಿದವರಿಗೆ ಹಾಗೂ ಮಹಿಳೆಯರಿಗೆ 40 ವರ್ಷ ವಯೋವುತಿ ಒಳಗಿನ ಹಾಗೂ 40 ವರ್ಷ ಮೀರಿದವರಿಗೆ ಅಥ್ಲೇಟಿಕ್ಸ್, ಫುಟ್ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಬ್ಯಾಡ್ಮಿಂಟನ್, ಕ್ಯಾರಮ್, ಬೀಜ್, ಕ್ರಿಕೆಟ್, ಬ್ಯಾಸ್ಕೇಟ್ ಬಾಲ್, ಚೆಸ್, ಟೇನ್ನಿ ಕ್ವಾಟ್, ಥ್ರೋಬಾಲ್, ಈಜು, ಕುಸ್ತಿ, ಸಾಂಸ್ಕೃತಿಕ ಸ್ಪರ್ಧೆಗಳಾದ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ನೃತ್ಯ, ವಾದ್ಯ ಸಂಗೀತ, ಸ್ಪರ್ಧೆಗಳನ್ನು ನಡೆಸಲಾಗುವುದು.ಹೆಚ್ಚಿನ ವಿವರಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ, ಗುಲ್ಬರ್ಗ ಇವರಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08472- 278637ಕ್ಕೆ ಸಂಪರ್ಕಿಸಬಹುದು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.