ಗುಲ್ಬರ್ಗಾ

ಸಾಹಿತ್ಯ ಸಮ್ಮೇಳನಕ್ಕೆ ಗುರುಮಠಕಲ್ ಕಸಾಪ ಬೆಂಬಲ

Published On :

ಗುರುಮಠಕಲ್: ಯಾದಗಿರಿಯಲ್ಲಿ ನ. 16 ಮತ್ತು 17ರಂದು ನಡೆಯುವ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ತಾಯಿಯ ತೇರು ಏಳೆಯಲು ಗುರುಮಠಕಲ್ ಮತಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ನೀಡಲಿದೆ ಎಂದು ಖಾಸಾಮಠದ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿ ಘೋಷಿಸಿದರು.
ಪಟ್ಟಣದ ಖಾಸಾಮಠ ಅವರಣದಲ್ಲಿ ಕಸಾಪ ಆಯೋಜಿಸಿದ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸಭೆ ನೇತೃತ್ವ ವಹಿಸಿ ಮಾತನಾಡಿದರು.
ನಿರ್ಣಯ: ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗುರುಮಠಕಲ್ ಭಾಗಕ್ಕೆ ಅನ್ಯಾಯವಾಗಿದೆ ಎಂದು ಖಂಡಿಸಿ ಬಹಿಷ್ಕಾರ ಹಾಕಲಾಗುವುದು ಎಂದು ಸಭೆ ನ.10ರಂದು ನಿರ್ಣಯಿಸಿದಾಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸ್ವಾಮಿಗಳ ಹತ್ತಿರ ವಿಷಾದನೆ ಮಾಡಿರುವುದರಿಂದ ಮತ್ತು ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಪ್ರಥಮ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದರಿಂದ ಕನ್ನಡ ಸೇವೆಗಾಗಿ ಎಲ್ಲರೂ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಶಾಂತವೀರರು ತಿಳಿಸಿದರು. ಬಸವರಾಜ ದಳಪತಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜನಾರ್ದನ ಬುಡ್ಡಪ್ಪ, ವಿಜಯರಾಜ ಶಾಸ್ತ್ರಿ, ನಾಗಪ್ಪ ನಾಗೂರ ಉಪಸ್ಥಿತರಿದ್ದರು.
ಎಂ. ಹೊಸಮನಿ ಸ್ವಾಗತಿಸಿ ವಂದಿಸಿದರು. ಕಸಾಪ ಕಾರ್ಯದರ್ಶಿ ಎಂ.ಬಿ. ನಾಯಕಿ ನಿರೂಪಿಸಿದರು.
ಪರಿಷತ್ ಜಿಲ್ಲಾಧ್ಯಕ್ಷರ ತಪ್ಪೊಪ್ಪಿಗೆ: ಗುರುಮಠಕಲ್ ಭಾಗಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿಯವರು ಶ್ರೀಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗುರುಮಠಕಲ್ ಅಧ್ಯಕ್ಷ ಡಾ.ಭೀಮಾಶಂಕರ ಮುತ್ತಗಿ ಅವರ ಹೆಸರನ್ನು ಆಮಂತ್ರಣ ಪತ್ರದಲ್ಲಿ ಮುದ್ರಿಸದೇ ಇರುವುದು ಗೊಂದಲಗಳಿಗೆ ಕಾರಣವಾಗಿತ್ತು. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಸಿದ್ದಪ್ಪ ಹೊಟ್ಟಿಯವರು ಸ್ವಾಮಿಗಳಿಗೆ ಮನವರಿಕೆ ಮಾಡಿದ್ದರಿಂದ ಅವರ ಮಾತಿನ ಮೇರೆಗೆ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ ಎಂದು ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.