ಗುಲ್ಬರ್ಗಾ

ಪಾರದರ್ಶಕ ಆಡಳಿತದಿಂದ 'ಸಹಕಾರ' ಅಭಿವೃದ್ಧಿ

Published On :

ಕನ್ನಡಪ್ರಭ ವಾರ್ತೆ  ಗುಲ್ಬರ್ಗ  ನ.17
ಸಹಕಾರ ಸಂಘಗಳ ಮುಖ್ಯಸ್ಥರು ಪಾರದರ್ಶಕವಾಗಿ ಆಡಳಿತ ನಡೆಸಿದಾಗ ಮಾತ್ರ ಸಹಕಾರಿ ಸಂಘಗಳು ಆರ್ಥಿಕವಾಗಿ ಬೆಳವಣಿಗೆ ಹೊಂದುವುದರ ಜತೆಗೆ ಷೇರುದಾರರಿಗೆ ಆದಾಯ ನೀಡಲು ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ನಗರದ ಜಗದ್ಗುರು ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು, ಗುಲ್ಬರ್ಗ, ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೇರಿದಂತೆ ವಿವಿಧ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 60ನೇ ಅಖಿಲ ಭಾರತ ಸಹಕಾರ ಸಪ್ತಾಹ 2013 ಸಹಕಾರ ಸಂಬಂಧಿ ತೆರಿಗೆ ಮತ್ತು ಕಾಯ್ದೆ ದಿನದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗುಳೆ ತಪ್ಪಿಸಲು ಪ್ರಯತ್ನಿಸಿ: ಜಿಲ್ಲೆಯ ಬಹುತೇಕ ಹಳ್ಳಿ- ತಾಂಡಾಗಳ ಬಡ ಜನತೆ ಕೆಲಸವಿಲ್ಲದೆ ದೂರದ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದು, ಅದರಿಂದ ತಪ್ಪಿಸಲು ಸಹಕಾರಿ ಸಂಘಗಳು ವಿವಿಧ ಯೋಜನೆಗಳು ರೂಪಿಸಿ ಅವರಿಗೆ ಸ್ವಾವಲಂಬಿ ಜೀವನಕ್ಕೆ ನಾಂದಿ ಹಾಡಬೇಕು ಎಂದು ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ ಮನವಿ ಮಾಡಿದರು.
ಇಚ್ಛಿಸಿದರೆ ಎಲ್ಲ ಗ್ರಾಮಗಳಲ್ಲಿ ಹಾಲು ಉತ್ಪಾದನಾ ಘಟಕ: ಗುಲ್ಬರ್ಗ- ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘ ಮುಂದಾದರೆ ಚಿಂಚೋಳಿ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಹಾಲು ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು. ತಾಲೂಕಿನಲ್ಲಿ ನೀರು ಮತ್ತು ಮೇವು ಅಧಿಕವಾಗಿರುವುದರಿಂದ ಪ್ರತಿಯೊಂದು ಮನೆಗೂ 5 ಹಸುಗಳನ್ನು ನೀಡಿ ಹಾಲು ಉತ್ಪಾದನೆ ಮತ್ತು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್, ಜಿಪಂ ಅಧ್ಯಕ್ಷ ರಮೇಶ ಮರಗೋಳ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಸಿದ್ರಾಮರೆಡ್ಡಿ ಪಾಟೀಲ್, ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಅಧ್ಯಕ್ಷ ಶಕುಂತಲಾ ಬೆಲ್ದಾಳೆ, ಮಹಾಮಂಡಳದ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್, ಗುಲ್ಬರ್ಗ- ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಭೀಮನಗೌಡ ಪಾಟೀಲ್, ಚಂದ್ರಶೇಖರ ತಳ್ಳಳ್ಳಿ, ಭೀಮಾಶಂಕರ, ಸುನಂದಾ, ಶರಣಪ್ಪ ದೇವರಮನಿ, ಶರಣಬಸಪ್ಪ ಬೆಣ್ಣೂರ್ ಮತ್ತು ವಿವಿಧ ಸಹಕಾರ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.