ಗುಲ್ಬರ್ಗಾ

ನುಸಿ ಅಕ್ಕಿ, ರೊಟ್ಟಿ ಇನ್ನೆಷ್ಟು ದಿನ ತಿನ್ಬೇಕ್ರೀ...

Published On :

ಸುರಪುರ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ. ಸರ್ಕಾರಿ ಸೌಲಭ್ಯ ನೀಡದೆ ಸಮಾಜ ಕಲ್ಯಾಣ ಅಧಿಕಾರಿ ದುರಾಡಳಿತ ನಡೆಸುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಎಬಿವಿಪಿ ಕಾರ್ಯಕರ್ತರೊಂದಿಗೆ ದಿಢೀರನೆ ಪ್ರತಿಭಟನೆ ನಡೆಸಿದರು.
  ಸಕಾಲಕ್ಕೆ ಗುಣಮಟ್ಟದ ಊಟ ನೀಡುತ್ತಿಲ್ಲ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆಮಟ್ಟದ ಆಹಾರ ಪೂರೈಸುತ್ತಿದ್ದಾರೆ. ನುಸಿ ಹತ್ತಿದ ಅಕ್ಕಿಯ ಅನ್ನ, ಜೋಳದ ರೊಟ್ಟಿ ತಿನ್ನುವ ದುಸ್ಥಿತಿ ಇದೆ. ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ವಿದ್ಯಾರ್ಥಿಗಳನ್ನೇ ಗದರಿಸುತ್ತಾರೆ ಎಂದು ಆರೋಪಿಸಿದರು.
  ವಸತಿ ನಿಲಯದ ಕುಡಿಯುವ ನೀರಿನ ಟ್ಯಾಂಕ್ ಹಲವು ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಕಲುಷಿತ ನೀರು ಕುಡಿದು ಅನೇಕ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇವೆಲ್ಲವನ್ನೂ ನೋಡಿಯೂ ತಾಲೂಕು ಆಡಳಿತ ವ್ಯವಸ್ಥೆ ಕಣ್ಣುಮುಚ್ಚಿ ಕುಳಿತಿದೆ. ಇದರ ಹಿಂದಿನ ಉದ್ದೇಶ ಏನು ಎಂಬುದು ತಿಳಿಯುತ್ತಿಲ್ಲ ಎಂದು ಹಲವಾರು ವಿದ್ಯಾರ್ಥಿಗಳು ದೂರಿದರು.
  ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಘಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಬೇಡಿಕೆ ಈಡೇರಿಸದಿದ್ದರೆ ಉಪವಾಸ ಆರಂಭಿಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು. ಇದಕ್ಕೆ ಅಧಿಕಾರಿಗಳು ಸ್ಪಂದಿಸುವ ಭರವಸೆ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯಲಾಯಿತು.
  ಎಬಿವಿಪಿ ಜಿಲ್ಲಾ ಪ್ರಮುಖ ಉಪೇಂದ್ರ ನಾಯಕ, ನಗರಾಧ್ಯಕ್ಷ ಶರಣು ಬೀಚಗತ್ತಗೇರಿ, ತಾಲೂಕು ಪ್ರಮುಖರಾದ ಮಂಜುನಾಥ ಶೆಟ್ಟಿ, ಗಂಗಾಧರ ನಾಯಕ, ರವಿ ಚಿಕ್ಕನಳ್ಳಿ, ಸಂತೋಷ ಕುಂಬಾರಪೇಟೆ, ಲಕ್ಷ್ಮಣ ಪ್ಯಾಪಲಿ, ಶರಣು ಕಿರದಳ್ಳಿ, ಭಾಗಣ್ಣ ಗೌಡಗೇರಾ, ಲಕ್ಷ್ಮೀಕಾಂತ ಗೋನಾಲ ಸೇರಿದಂತೆ ನಿಲಯದ ಅನೇಕ ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.