ಗುಲ್ಬರ್ಗಾ

ಶಿಕ್ಷಣ ಸಂಸ್ಥೆಗಳು ವೈಜ್ಞಾನಿಕ ಮನೋಭಾವ ಮೂಡಿಸಲಿ

Published On :

ಕನ್ನಡಪ್ರಭ ವಾರ್ತೆ  ಗುಲ್ಬರ್ಗ  ನ.17
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಅವರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಕೆಲಸ ಮಾಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಭಿಪ್ರಾಯಪಟ್ಟರು.
ನಗರದಲ್ಲಿ ಕಾಯಕ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಸ್ಪರ್ಧಾ ಯುಗದಲ್ಲಿ ಶಿಕ್ಷಣ ಸಂಸ್ಥೆಗಳು ಹೊಸ ಹೊಸ ಆಯಾಮಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂದರು.
ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳು ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾಯಕ ಶಿಕ್ಷಣ ಸಂಸ್ಥೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳು ಜೀವನದಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ವಿ ಸಾಧಿಸಲು ಸಾಧ್ಯ. ಮಕ್ಕಳ ಸರ್ವಾಂಗೀಣ ಬೆಳವಣೆಗೆಗೆ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಒಳ್ಳೆಯ ಕೆಲಸಕ್ಕೆ ಸರ್ಕಾರ ಯಾವಾಗಲು ಸಹಾಯ, ಸಹಕಾರ ನೀಡುತ್ತದೆ. ಕಾಯಕ ಶಿಕ್ಷಣ ಸಂಸ್ಥೆ ನೀಡುವ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸಹಾಯ ನೀಡುವುದಾಗಿ ಹೇಳಿದರು.
ಸಮಾರಂಭದಲ್ಲಿ ಸಂಸ್ಥೆ ಸಂಸ್ಥಾಪಕ ಶಿವರಾಜ ಪಾಟೀಲ್, ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಬಿ.ಜವಳಿ, ಗುಲ್ಬರ್ಗ ವಿಶ್ವವಿದ್ಯಾಲಯದ ಡಾ.ರವೀಂದ್ರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಂ. ಸಾಲೂಕೆ, ಡಾ. ಶ್ರೀನಿವಾಸರೆಡ್ಡಿ ಪಾಟೀಲ್, ಬಸವರಾಜ ಪಾಟೀಲ್, ಸ್ವಪ್ನಾ ರೆಡ್ಡಿ ಶಿವರಾಜ ಪಾಟೀಲ್, ಸುಲಫಲ ಮಠದ ಮಹಾಂತ ಶಿವಾಚಾರ್ಯರು, ಜಗನ್ನಾಥ ತರನಳ್ಳಿ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.