ಗುಲ್ಬರ್ಗಾ

ನಾಳೆ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Published On :

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನ. 20ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ ಪಟ್ಟಣದ ನೆಹರು ಕ್ರಿಡಾಂಗಣದಲ್ಲಿ ಗುರುಮಠಕಲ್ ಪಟ್ಟಣ,  ಇತರೆ 27 ಗ್ರಾಮಗಳಿಗೆ ಕುಡಿವ ನೀರು ಸರಬರಾಜು ಮಾಡುವ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಭಾಗವಹಿಸುವರು.
ವಿವಿಧ ಪ್ರಮುಖರು: ಪಟ್ಟಣದ ಒಳಚರಂಡಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮ ಕೈಗೊಂಡು ಬಹಿರಂಗ ಸಭೆಯಲ್ಲಿ ಭಾಗವಹಿಸಿ, ನಂತರ ಪಪಂ ಕಾರ್ಯಾಲಯದಲ್ಲಿ ಜರುಗುವ ಯಾದಗಿರಿ ಜಿಲ್ಲಾ ಪರಿಶೀಲನಾ ಸಭೆ ಕೈಗೊಳ್ಳುವರು. ಈ ಕಾರ್ಯಕ್ರಮಕ್ಕೆ ರೈಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಜವಳಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ ಭಾಗವಹಿಸುವರು. ವಿವಿಧ ರಾಜಕೀಯ ಗಣ್ಯ ವ್ಯಕ್ತಿಗಳು ಭಾಗವಹಿಸುವರು.  
ಪಾಸ್ ಕಡ್ಡಾಯ: ಈ ನಿಟ್ಟಿನಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದವರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ರಾಜಕೀಯ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ಪಾಸ್ ಹೊಂದಿರಬೇಕು ಎಂದು ಎಸ್ಪಿ ತಿಳಿಸಿದ್ದಾರೆ.
ವಾಹನ ಸಂಚಾರ ನಿಷೇಧ: ಮುಖ್ಯಮಂತ್ರಿ ಭೇಟಿ ಹಿನ್ನಲೆಯಲ್ಲಿ ಅಂದು ಬೆ.9ರಿಂದ  ಸಂಜೆ 3ರವರೆಗೆ  ಗುರುಮಠಕಲ್ ಪಟ್ಟಣಕ್ಕೆ ಬರುವ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸದರಿ ವಾಹನಗಳು ಗುರುಮಠಕಲ್ ಪಟ್ಟಣಕ್ಕೆ ಚಂಡ್ರಕಿ, ಯಾನಾಗುಂದಿ ಮಾರ್ಗವಾಗಿ ಬರುವುದು. ಗುರುಮಠಕಲ್ ಪಟ್ಟಣದ ಗಾಂಧಿ ಮೈದಾನದಿಂದ ಬಸವೇಶ್ವರ ಸರ್ಕಲ್ವರೆಗೆ  ನೋ ಟ್ರಾಫೀಕ್ ಜೋನ್ ಮಾಡಲಾಗಿದ್ದು, ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮೇಲ್ಕಂಡ ಸೂಚನೆಗಳನ್ನು ಪಾಲನೆ ಮಾಡಿ ಪೊಲೀಸರೊಂದಿಗೆ ಸಹಕರಿಸುವಂತೆ ಎಸ್ಪಿ ವಂಶಿಕೃಷ್ಣ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.