ಗುಲ್ಬರ್ಗಾ

ಪ್ರತಿ 3 ತಿಂಗಳಿಗೊಮ್ಮೆ ಪರಿಶೀಲನೆ ನಡೆಸಿ: ಖರ್ಗೆ

Published On :

ಗುರುಮಠಕಲ್: ಹೈ-ಕ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿ, ಈ ಭಾಗದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಕೈಗೊಳ್ಳುತ್ತಿರುವ ಪ್ರಗತಿ ಕಾಮಗಾರಿಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಬೇಕೆಂದು ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು. ಗುರುಮಠಟಕಲ್ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಹೈ.ಕ. ಭಾಗಕ್ಕೆ 371(ಜೆ)ನೇ ಅನ್ವಯ ಶಿಕ್ಷಣ, ಉದ್ಯೋಗ ಕಲ್ಪಿಸುವುದು ಮತ್ತು ಮಂಡಳಿ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಲು ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.
ರಸ್ತೆ ಅಭಿವೃದ್ಧಿಗೆ ಆದ್ಯತೆ ಕೊಡಿ: ಹೈ.ಕ. ಭಾಗದಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಸಂಚರಿಸಲು ತೀವ್ರ ತೊಂದರೆಯಾಗುತ್ತಿವೆ. ಹೀಗಾಗಿ ಈ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಪ್ರತಿ ಕ್ಷೇತ್ರಕ್ಕೂ ಅನುದಾನ ಬಿಡುಗಡೆಗೊಳಿಸಿ ಆ ಹಣದಿಂದ ಕಾಮಗಾರಿ ಪ್ರಗತಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದರ ಬಗ್ಗೆ ಆಯಾ ಶಾಸಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಪರಿಶೀಲಿಸಬೇಕೆಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.