ಇಂದು ಜಿಲ್ಲಾ ಕೃಷಿ ಉತ್ಸವ
ಗುಲ್ಬರ್ಗ: ಕೃಷಿ ಇಲಾಖೆ ಹಾಗೂ ಗುಲ್ಬರ್ಗದ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನ.22ರಂದು ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಕೃಷಿ ಉತ್ಸವ ಆಯೋಜಿಸಲಾಗಿದೆ. ಬೆಳಗ್ಗೆ 9.30ಕ್ಕೆ ಗುಲ್ಬರ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಥಬ್ಧ ಚಿತ್ರ ಉದ್ಘಾಟನೆಯಾಗಲಿದೆ. ನಂತರ 11ಕ್ಕೆ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಕೃಷಿ ಉತ್ಸವ ಉದ್ಘಾಟನೆ ಜರುಗಲಿದೆ. ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಜಿಲ್ಲಾ ಕೃಷಿ ಉತ್ಸವದ ಉದ್ಘಾಟನೆ ನೆರವೇರಿಸುವರು. ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಬೀದರ್ ಲೋಕಸಭಾ ಸದಸ್ಯ ಡಾ. ಎನ್. ಧರ್ಮಸಿಂಗ್, ಸಂಸತ್ ಸದಸ್ಯ ಬಸವರಾಜ ಪಾಟೀಲ್ ಸೇಡಂ ಅವರು ಉಪಸ್ಥಿತರಿರುವರು. ಗುಲ್ಬರ್ಗ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು. ಗುಲ್ಬರ್ಗ ಜಿಪಂ ಅಧ್ಯಕ್ಷ ರಮೇಶ ಮರಗೋಳ, ಶಾಸಕರಾದ ಮಾಲಿಕಯ್ಯ ವಿ. ಗುತ್ತೇದಾರ, ಬಿ.ಆರ್. ಪಾಟೀಲ್, ಜಿ. ರಾಮಕೃಷ್ಣ, ಡಾ. ಉಮೇಶ ಜಾಧವ, ಡಾ. ಅಜಯಸಿಂಗ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಕೆ.ಬಿ. ಶಾಣಪ್ಪ, ಅಲ್ಲಂಪ್ರಭು ಪಾಟೀಲ್, ಅಮರನಾಥ ಪಾಟೀಲ್, ಬೆಂಗಳೂರು ಕರ್ನಾಟಕ ಕೃಷಿ ಮಿಷನ್ ಅಧ್ಯಕ್ಷ ಡಾ. ಎಸ್.ಎ. ಪಾಟೀಲ್, ಗುಲ್ಬರ್ಗ ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಶಂಕರಶೆಟ್ಟಿ ಮಾಲಿಪಾಟೀಲ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಧಂಗಾಪುರ, ಕರ್ನಾಟಕ ಕೃಷಿ ಮಿಷನ್ ಸದಸ್ಯರಾದ ಬಸವರಾಜ ಇಂಗಿನ್, ಬಸವರಾಜ ಜೀವಣಗಿ, ಗುಲ್ಬರ್ಗ ತಾಪಂ ಅಧ್ಯಕ್ಷ ಚನ್ನವೀರಪ್ಪ ಎಂ. ಸಲಗರ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು. ಗುಲ್ಬರ್ಗ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮೀತಸಿಂಗ್, ಜಿಪಂ ಸಿಇಒ ಟಿ.ಎಚ್.ಎಂ. ಕುಮಾರ್ ಹಾಗೂ ಬೆಂಗಳೂರಿನ ಕೃಷಿ ಜಂಟಿ ನಿರ್ದೇಶಕ ಡಾ.ಸಿದ್ಧರಾಜು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ರಾಜೀವ ಆವಾಸ್ ಯೋಜನೆ ಕಾರ್ಯಾಗಾರ
ಗುಲ್ಬರ್ಗ: ಮೈಸೂರು ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಹ್ಯೂಮನ್ ಸೆಟ್ಲ್ಮೆಂಟ್ ಬೆಂಗಳೂರು ಸಹಯೋಗದಲ್ಲಿ ರಾಜೀವ ಆವಾಸ ಯೋಜನೆ ಕುರಿತ ಕಾರ್ಯಾಗಾರವನ್ನು ನಗರ ಸ್ಥಳೀಯ ಸಂಸ್ಥೆಗಳ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿ ಹಾಗೂ ಅಭಿಯಂತರರಿಗೆ ನ.22, 23ರಂದು ಗುಲ್ಬರ್ಗ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಗುಲ್ಬರ್ಗ ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ 22ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ವಿಷಯ ತಜ್ಞರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

