ಗುಲ್ಬರ್ಗಾ

ನಾಳೆ ರಾಜ್ಯೋತ್ಸವ

Published On :

ಗುಲ್ಬರ್ಗ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗುಲ್ಬರ್ಗ ಆಶ್ರಯದಲ್ಲಿ ನ.24 ರಂದು ಸಂಜೆ 5.15 ಗಂಟೆಗೆ ನಗರದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ನವೋದಯ ಕವಿ- ಕಾವ್ಯ ಗಾಯನ ಚಿಂತನಮಾಲೆ ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  ಗುಲ್ಬರ್ಗ, ಯಾದಗಿರಿ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿರಿಯ ಲೇಖಕ ಪ್ರೊ. ಕೆ.ಎಸ್. ಮಧುಸೂದನ ಡಿವಿಜಿ ಅವರ ಬದುಕು- ಬರಹ ಕುರಿತು ಉಪನ್ಯಾಸ ನೀಡಲಿದ್ದಾರೆ. ಶಿವಶಂಕರ ಬಿರಾದಾರ ಮತ್ತು ಸಂಗಡಿಗರು ಕಾವ್ಯಗಾಯನ ಮಾಡಲಿದ್ದಾರೆ. ಜಿಪಂ ಉಪಾಧ್ಯಕ್ಷ ಅನಿತಾ ಪವನಕುಮಾರ್ ವಳಕೇರಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ಪ್ರೊ. ಸೂಗಯ್ಯ ಹಿರೇಮಠ, ವಿಜಯ ಹಾಗರಗುಂಡಗಿ ಸನ್ಮಾನಿಸಲಾಗುವುದು.
--
ಜಿಲ್ಲಾಧ್ಯಕ್ಷರ ನೇಮಕ
ಸುರಪುರ:  ಟಿಪ್ಪು ಸುಲ್ತಾನ್ ಮುಸ್ಲಿಂ ಯುವಕ ಸಂಘದ ಯಾದಗಿರಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಮೊಹ್ಮದ್ ಮೌಲಾ ಸೌದಾಗರ್ ನೇಮಕಗೊಂಡಿದ್ದಾರೆ.
  ಇಲ್ಲಿಯ ಟಿಪ್ಪು ಸುಲ್ತಾನ್ ಮುಸ್ಲಿಂ ಯುವಕ ಸಂಘದ ಕೇಂದ್ರ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿಸಲು ನಿರ್ಧರಿಸಲಾಗಿದೆ. ರಾಜ್ಯ, ಜಿಲ್ಲಾ ಮಟ್ಟದ ನಾಯಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಸಂಘದ ರಾಜ್ಯಾಧ್ಯಕ್ಷ ಅರ್ಷದ್ ದಖನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ತಲತ್ ಚಾಂದ್ ಶಹಪುರ, ಜಿಲ್ಲಾ ಉಪಾಧ್ಯಕ್ಷ ಇಮಾಂ ಸಾಬ್ ವಗಣಗೇರಿ, ಟಿಪ್ಪು ಸುಲ್ತಾನ್ ಸೇವಾ ಸಂಘದ ತಾಲೂಕು ಅಧ್ಯಕ್ಷ ಖಾಜಾ ಖಲೀಲ್ ಅಹ್ಮದ್ ಅರಕೇರಿ, ದರವೇಶಿ ಕಮಿಟಿ ಜಿಲ್ಲಾಧ್ಯಕ್ಷ ಮೊಹ್ಮದ ಇಸ್ಮಾಯಿಲ್ ಷಾ, ಪ್ರಮುಖರಾದ ಮೊಹ್ಮದ ರಫೀಕ್ ನಾಶಿ, ಮೊಹ್ಮದ ಸಾದಿಕ್ ಹತ್ತಿವಾಲ್, ಮೊಹ್ಮದ ಸರಮುದ್ದೀನ್ ಖುರೇಸಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.