ರಾಜೀವ ಆವಾಸ್; ಸಮರ್ಪಕ ಅಭಿವೃದ್ಧಿಗೆಯೋಜನಾ ವರದಿ ರೂಪಿಸಿ: ಜಿಲ್ಲಾಧಿಕಾರಿ
ಗುಲ್ಬರ್ಗ: ಪಟ್ಟಣಗಳಲ್ಲಿರುವ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ರಾಜೀವ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಜಿಲ್ಲೆಯ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕ ವಿವರ ಯೋಜನಾ ವರದಿ ರೂಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎನ್.ವಿ.ಪ್ರಸಾದ್ ಸೂಚಿಸಿದರು.
ಶುಕ್ರವಾರ ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಹಾಗೂ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಹ್ಯೂಮನ್ ಸೆಟ್ಲ್ಮೆಂಟ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಹಳೇ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನೆ ಮಂಡಳಿ ಅಧಿಕಾರಿಗಳು, ಅಭಿಯಂತರರಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
5 ಲಕ್ಷಕ್ಕಿಂತಲೂ ಹೆಚ್ಚಿನ ಜನಸಂಖ್ಯೆ ಇರುವ ಪಟ್ಟಣಗಳಲ್ಲಿನ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ತಗಲುವ ವೆಚ್ಚದ ಶೇ.25 ರಷ್ಟನ್ನು ಫಲಾನುಭವಿಗಳಿಂದ, ಶೇ.50 ರಷ್ಟು ಕೇಂದ್ರ ಸರ್ಕಾರ ನೀಡುತ್ತದೆ. ಅದೇ ರೀತಿ 5 ಲಕ್ಷಕ್ಕಿಂತ ಕಡಿಮೆ ಇರುವ ಪಟ್ಟಣದ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ತಗಲುವ ವೆಚ್ಚವನ್ನು ಶೇ.10 ರಷ್ಟು ಮಾತ್ರ ಫಲಾನುಭವಿಗಳು ಭರಿಸಬೇಕಾಗುತ್ತದೆ. ರಾಜೀವ ಆವಾಸ್ ಯೋಜನೆಯಡಿ ಬೇರೆ ಜಿಲ್ಲೆಯವರು ಕೈಗೊಂಡಿರುವ ಅತ್ಯುತ್ತಮ ಸಾಧನೆಗಳನ್ನು ಎಲ್ಲರೂ ಹಂಚಿಕೊಳ್ಳಬೇಕೆಂದು ಹೇಳಿದರು.
ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಸಮಾಲೋಚಕ ಪ್ರೊ.ನಾರಾಯಣಶಾಸ್ತ್ರಿ ಮಾತನಾಡಿ, ರಾಜ್ಯದಲ್ಲಿ 10 ನಗರ ಪ್ರದೇಶ ಕೊಳಗೇರಿ ಸ್ವಚ್ಛ ನಗರಗಳನ್ನಾಗಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಕಳೆದ ತಿಂಗಳು ಈ ನಿಟ್ಟಿನಲ್ಲಿ ಹೊಸ ನೀತಿ ರೂಪಿಸಲಾಗಿದೆ. ಇದರಡಿ ಬೆಂಗಳೂರಿನಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಗುಲ್ಬರ್ಗದಲ್ಲಿ ಏರ್ಪಡಿಸುತ್ತಿರುವ ಈ ಕಾರ್ಯಾಗಾರ ಎರಡನೆಯದ್ದಾಗಿದೆ ಎಂದರು.
ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಬೋಧಕಿ ಗೀತಾ ಎ. ಮಾತನಾಡಿದರು. ಗುಲ್ಬರ್ಗ ಮಹಾನಗರ ಪಾಲಿಕೆಯ ಆಯುಕ್ತ ಶ್ರೀಕಾಂತ ಕಟ್ಟಿಮನಿ ಮಾತನಾಡಿ, ಗುಲ್ಬರ್ಗ ನಗರದಲ್ಲಿ ಒಟ್ಟು 57 ಕೊಳಚೆ ಪ್ರದೇಶಗಳಿದ್ದು, ಈಗಾಗಲೇ 14 ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ವಿವರ ಯೋಜನಾ ವರದಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಸದ್ಯ 18 ಪ್ರದೇಶಗಳ ವಿವರ ಯೋಜನಾ ವರದಿ ಸಿದ್ಧವಿದೆ ಎಂದರು.
ಗುಲ್ಬರ್ಗ ನಗರಕ್ಕೆ ಕೊಳಚೆ ಪ್ರದೇಶ ಅಭಿವೃದ್ಧಿಗೆ ಪ್ರಾಯೋಗಿಕವಾಗಿ 66 ಕೋಟಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ನಗರದ ಎಲ್ಲ 57 ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ವಿವರ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಒಟ್ಟು 18 ಅಭಿಯಂತರರು ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ವಯ ವಿವರ ಯೋಜನಾ ವರದಿ ಸಿದ್ಧಪಡಿಸುತ್ತಿದ್ದಾರೆ ಎಂದರು.
ಮೈಸೂರಿನ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ನಿರ್ದೇಶಕ ವೆಂಕಟೇಶ ಕಡಗದಕೈ, ವಿವಿಧ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನೆ ಮಂಡಳಿಯ ಅಧಿಕಾರಿಗಳು ಹಾಗೂ ಅಭಿಯಂತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

