ಚಿಕಿತ್ಸೆಯಿಂದ ಕುಷ್ಠರೋಗ ನಿವಾರಣೆ ಸಾಧ್ಯ
ಗುಲ್ಬರ್ಗ: ಪ್ರಾರಂಭಿಕ ಹಂತದ ಕುಷ್ಠರೋಗವನ್ನು ಕ್ರಮಬದ್ಧವಾಗಿ ಬಹುವಿಧ ಔಷಧಿ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣ ರೋಗ ನಿವಾರಣೆ ಮಾಡಬಹುದು. ಅಂಗವಿಕಲತೆ ತಡಗಟ್ಟಬಹುದು. ಈ ಔಷಧಿಗಳು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತವೆ ಎಂದು ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಎಂ.ಎಸ್. ವರ್ಮಾ ತಿಳಿಸಿದರು.
ಇಲ್ಲಿನ ನಗರ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕುಷ್ಠರೋಗ ಅರಿವು ಮತ್ತು ಸಮೀಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕುಷ್ಠರೋಗವು ಬಹಳ ನಿಧಾನವಾಗಿ ಹರಡುತ್ತದೆ. ರೋಗದ ಲಕ್ಷಣ ಕಾಣಿಸಿಕೊಳ್ಳಲು 2 ರಿಂದ 5 ವರ್ಷ ಅವಧಿ ಬೇಕಾಗುತ್ತದೆ ಎಂದರು.
ಚಿಕಿತ್ಸೆ ಹೊಂದದ ಕುಷ್ಠರೋಗಿ ಸೀನಿದಾಗ, ಕೆಮ್ಮಿದಾಗ ಹೊರಹೊಮ್ಮಿದ ಬ್ಯಾಕ್ಚೀರಿಯಾದಿಂದ ರೋಗ ಹರಡುತ್ತದೆ. ಕೈ-ಕಾಲುಗಳಲ್ಲಿ ಜೋಮು ಉಂಟಾಗುವುದು. ದೇಹದ ಮೇಲಿನ ಸ್ಪರ್ಶಜ್ಞಾನ ಇಲ್ಲದ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕುಷ್ಠರೋಗದ ಪ್ರಾರಂಭಿಕ ಲಕ್ಷಣಗಳಾಗಿವೆ ಎಂದರು.
ನ.22ರಿಂದ 29 ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಅರಿವು ಮತ್ತು ಸಮೀಕ್ಷಾ ಕಾರ್ಯಕ್ರಮ ಅಂಗವಾಗಿ ನಗರದ ಕೊಳಚೆ ಪ್ರದೇಶಗಳಲ್ಲಿ ಸಮೀಕ್ಷೆಗೆ ಆಗಮಿಸುವ ಕಿರಿಯ ಆರೋಗ್ಯ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಸಹಕರಿಸಿ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಎಂ.ಎಸ್. ವರ್ಮಾ ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ.ರೇಣುಕಾ ಕಟ್ಟಿ, ಸಹಾಯಕ ಕುಷ್ಠರೋಗ ಅಧಿಕಾರಿ ಡಾ. ಎಂ.ಸಿ. ಕಾಂಬಳೆ, ಅಣ್ಣಪ್ಪ ಎಚ್.ವೈ., ದೇವೀಂದ್ರಪ್ಪ ಸೋಮಶೇಖರ ಇಟಗಿ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

