ಇಂದಿನಿಂದ ಕಂಪ್ಯೂಟರ್ ಆಪರೇಟರ್ಗಳ ಧರಣಿ
ಶಹಾಪುರ: ಯಾದಗಿರ ಜಿಲ್ಲೆಯ 117 ಗ್ರಾಮ ಪಂಚಾಯತಿಗಳಲ್ಲಿ ಸುಮಾರು 8 ವರ್ಷಗಳಿಂದ ಗ್ರಾಪಂ ಎಲ್ಲಾ ಯೋಜನೆಗಳ ಕೆಲಸ ಕಾರ್ಯಗಳನ್ನು ಅಲ್ಪ ಸಂಬಳದಲ್ಲಿ ನಿರ್ವಹಿಸುತ್ತಾ ಬರಲಾಗಿದೆ. ಯಾವುದೇ ತರಹದ ಸೇವಾ ಭದ್ರತೆಯನ್ನು ಸಹ ನೀಡುತ್ತಿಲ್ಲ. ಇದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ಹಲವಾರು ಬಾರಿ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ದಿನನಿತ್ಯ ಗ್ರಾಪಂ ಸಿಬ್ಬಂದಿ ಮೇಲೆ ಸಾರ್ವಜನಿಕರಿಂದ ಮಾನಸಿಕವಾಗಿ, ದೈಹಿಕವಾಗಿ ಹಲ್ಲೆಯಾಗುತ್ತಿವೆ. ಅಲ್ಲದೇ ಅಧಿಕಾರಿಗಳು ಸಹ ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ನಮಗೆ ಗ್ರಾಪಂ ಮಟ್ಟದಲ್ಲಿ ಕೆಲಸ ನಿರ್ವಹಿಸಲು ತುಂಬಾ ತೊಂದರೆಯಾಗುತ್ತಿದೆ. ವಿಭಾಗ ಮಟ್ಟದ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಲು 23ರವರೆಗೆ ಸಮಯ ನೀಡಲಾಗಿತ್ತು. ಆದರೆ ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ. ಆದ್ದರಿಂದ ನ.25 ರಿಂದ ಜಿಲ್ಲೆಯ ಎಲ್ಲಾ ತಾಪಂ ಕಾರ್ಯಾಲಯದ ಮುಂದೆ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂಪ್ಯೂಟರ್ ಆಪರೇಟರ್ ಸಂಘದ ನಾಗರಾಜ ಗಚ್ಚಿ, ಬಿ.ಕೆ ಸಾಹು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

