ಗುಲ್ಬರ್ಗಾ

ವಿದ್ಯಾರ್ಥಿಯ ಉಜ್ವಲ ಭವಿಷ್ಯ ಶಿಕ್ಷಕನ ಕೈಲಿದೆ: ಶಾಸಕ ಡಾ.ಅಜಯಸಿಂಗ್

Published On :

ಜೇವರ್ಗಿ: ತಳಪಾಯ ಭದ್ರವಾದಲ್ಲಿ ಕಟ್ಟಡ ಸುಭದ್ರವಾಗಿರಲು ಸಾಧ್ಯ. ಅದರಂತೆ ಪ್ರಾಥಮಿಕ ಹಂತದ ಶಿಕ್ಷಣ ತಳಪಾಯದ ಭದ್ರ ಬುನಾದಿಯಂತೆ ಆಗಿದ್ದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.
ಪಟ್ಟಣದ ಸಜ್ಜನ್ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಶೈಕ್ಷಣಿಕ ಸಮ್ಮೇಳನ, ನಿವೃತ್ತ ಶಿಕ್ಷಕರು ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತಾವು ಕೂಡ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ನಡೆಸಬೇಕಾಗಿದೆ.  ಮುಂಬರುವ 10ನೇ ತರಗತಿಯ ಫಲಿತಾಂಶದಲ್ಲಿ ಗಣನೀಯ ಸಾಧನೆ ಮಾಡುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.  ಶಿಕ್ಷಕರ ಕೊರತೆ ನೀಗಿಸುವಲ್ಲಿ ತಾವು ಅವಿರತ ಪ್ರಯತ್ನ ನಡೆಸುತ್ತಿರುವುದಾಗಿ ಹೇಳಿದ ಅವರು, ನನ್ನ ತಂದೆ ಧರ್ಮಸಿಂಗ್ ಅವರನ್ನು ಸಚಿವ ಸ್ಥಾನದಿಂದ ಹಿಡಿದು ಮುಖ್ಯಮಂತ್ರಿ ಪಟ್ಟಕ್ಕೆ ತಂದ ಕ್ಷೇತ್ರದ ಜನತೆಯ ಋಣ ತೀರಿಸಲು ಎಂದಿಗೂ ಸಾಧ್ಯವಿಲ್ಲ. ಕ್ಷೇತ್ರದ ಜನತೆಯೂ ತಮಗು ತಮ್ಮ ತಂದೆಯವರಿಗೆ ನೀಡಿದ ಆಶೀರ್ವಾದದಿಂದ ಜೇವರ್ಗಿಯಲ್ಲಿ ಧರ್ಮಸಿಂಗ್ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಹೇಳಿದರು.
--
'ಎನ್‌ಎಸ್‌ಎಸ್ ಮೌಲ್ಯಗಳನ್ನು ಅಳವಡಿಸಿಕೊಳ್ಳಿ'
ಶಹಾಪುರ:ಯುವಕರಲ್ಲಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ತ್ಯಾಗ, ನಿಸ್ವಾರ್ಥ ಸೇವೆ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಎನ್‌ಎಸ್‌ಎಸ್ ಗುರಿಯಾಗಿದೆ.
ವಿದ್ಯಾರ್ಥಿಗಳು ಶಿಬಿರದಲ್ಲಿ ತಾವು ಕಲಿತ ಅಂಶಗಳನ್ನು ತಮ್ಮ ತಮ್ಮ ಗ್ರಾಮಗಳಿಗೆ ಹೋಗಿ ಅವುಗಳನ್ನು ಅರಿವು ಮೂಡಿಸಿದಾಗ ಸಾರ್ಥಕವಾಗುತ್ತದೆ. ಇದರಿಂದ ಗಾಂಧೀಜಿಯ ಗ್ರಾಮ ರಾಜ್ಯದ ಕಲ್ಪನೆ ಸಾಕಾರವಾಗುತ್ತದೆ ಎಂದು ಶಹಾಪುರದ ತಹಶೀಲದಾರ ಡಿ.ವೈ. ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಹಾಪುರದಲ್ಲಿ ಜರುಗಿದ ಬೀಗುಡಿ ಕಾಲೇಜಿನ ಎನ್‌ಎಸ್‌ಎಸ್ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.    ಕುಮಾರಿ ಶ್ವೇತ ಪ್ರಾರ್ಥನೆ ಮಾಡಿದರು. ಎನ್‌ಎಸ್‌ಎಸ್ ಅಧಿಕಾರಿ ದೇವಿಂದ್ರಪ್ಪ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಎಸ್.ಎಸ್. ಹಾಲಮಂಡಿಗೆ ಉಪನ್ಯಾಸಕರು ಶಾಂತವೀರಯ್ಯಸ್ವಾಮಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಮಿಣಜಿಗಿ ಗುರುಲಿಂಗಪ್ಪ ವಹಿಸಿದ್ದರು. ಎಂ.ಎಸ್. ಬಿರಾದಾರ ಸ್ವಾಗತಿಸಿ, ಗುಂಡೇಕರ ರಾಮಚಂದ್ರರಾವ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.