ವೈಭವದ ವೀರಭದ್ರೇಶ್ವರ ರಥೋತ್ಸವ
ಗುಲ್ಬರ್ಗ/ಶಹಾಬಾದ್: ಚಿತ್ತಾಪುರ ತಾಲೂಕಿನ ಸುಕ್ಷೇತ್ರ ಹಲಕರ್ಟಿಯ ಪುರಾಣ ಪ್ರಸಿದ್ಧ ವೀರಭದ್ರೇಶ್ವರ ರಥೋತ್ಸವ ಭಕ್ತರ ಜಯಘೋಷಗಳ ನಡುವೆ ಜರುಗಿತು.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಿಂದ ಆಗಮಿಸಿದ ಸಾವಿರಾರು ಭಕ್ತರು ಗುರುವಾರ ರಾತ್ರಿ ಅಗ್ಗಿ ತುಳಿದು ಶುಕ್ರವಾರದ ರಥೋತ್ಸವದಲ್ಲಿ ಭಾಗವಹಿಸಿದರು. ಬೆಳಗ್ಗೆ ವೀರಭದ್ರೇಶ್ವರ, ಕಾಳಿಕಾದೇವಿಗೆ ವಿಶೇಷ ಪೂಜೆ ನಡೆದು, ಸಂಜೆ ಚೌಡಮ್ಮ ಆಡುವಿಕೆ ನಡೆದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಚೌಡಮ್ಮನ ಮೆರವಣಿಗೆ ನಡೆಯಿತು. ಹಲಕರ್ಟಿ ಕಟ್ಟಿಮನಿ ಹಿರೇಮಠದ ಅಭಿನವ ಮುನೀಂದ್ರ ಶಿವಾಚಾರ್ಯರ ನೇತೃತ್ವದಲ್ಲಿ ಭವ್ಯ ರಥೋತ್ಸವ ನಡೆಯಿತು. ಭಕ್ತರು ಜಯಘೋಷದೊಂದಿಗೆ ಉತ್ತತ್ತಿ, ಬಾಳೆಹಣ್ಣುಗಳನ್ನು ರಥದ ಮೇಲೆ ಎಸೆದು ಕೃತಾರ್ಥರಾದರು. ರಥೋತ್ಸವದ ನಂತರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ದಂಡಗುಂಡ ಶ್ರೀಗಳು, ಇಂಚನೂರ ಶ್ರೀಗಳು, ಯರಗೋಳ ಶ್ರೀಗಳು ಉಪಸ್ಥಿತರಿದ್ದರು. ಸಿಪಿಐ ಸಂಜೀವಕುಮಾರ್, ವಿಜಯಕುಮಾರ್ ಹೊಸ್ನನಿ, ಪಿಎಸ್‌ಐ ನಟರಾಜ ಲಾಡೆ, ನೀಲಯ್ಯ ಸ್ವಾಮಿ ಸೇರಿದಂತೆ ಹಲವರಿಗೆ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

