ಗುಲ್ಬರ್ಗಾ

ಕ್ಷುಲ್ಲಕ ಕಾರಣಕ್ಕೆ ಜಗಳ; ಹತ್ಯೆಯಲ್ಲಿ ಅಂತ್ಯ

Published On :

ಗುಲ್ಬರ್ಗ: ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಕೊಲೆಯಾದ ಘಟನೆ ಸೋಮವಾರ ಸಂಭವಿಸಿದೆ.
ಬ್ರಹ್ಮಪುರದ ನಿವಾಸಿ ಲಿಂಗಪ್ಪ (27) ಎಂದು ಗುರುತಿಸಲಾಗಿದೆ. ಲಿಂಗಪ್ಪ ಮತ್ತು ಆನಂದ ಹೆಬ್ಬಾಳ ಇಬ್ಬರು ಸ್ನೇಹಿತರು ಮದ್ಯಪಾನ ಮಾಡುವ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದು ಆನಂದ ಎಂಬಾತ ಬಡಿಗೆಯಿಂದ ಹೊಡೆದ ಪರಿಣಾಮ ಲಿಂಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕೊಲೆ ಮಾಡಿದ ಆರೋಪಿ ಆನಂದ ಹೆಬ್ಬಾಳನನ್ನು ಬ್ರಹ್ಮುಪುರ ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಎಸ್ಪಿ, ಪಿಐ ಮತ್ತು ಪಿಎಸ್‌ಐ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.