ಗುಲ್ಬರ್ಗಾ

ಭಾಷೆ ಬಾಂಧವ್ಯ ವೃದ್ಧಿಗೆ ಗಡಿನಾಡು ಉತ್ಸವ

Published On :

ಆಳಂದ:  ಬರುವ ದಿನಗಳಲ್ಲಿ ಭಾಷೆಯ ಬಾಂಧವ್ಯಕ್ಕಾಗಿ ಗಡಿನಾಡಿನಲ್ಲಿ ಗಡಿನಾಡು ಉತ್ಸವ ಆಚರಣೆ ಕೈಗೊಳ್ಳಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಪಟ್ಟಣದ ಸಮತಾ ಲೋಕ ಶಿಕ್ಷಣ ಸಂಸ್ಥೆಯಡಿ ಶಾಲಾ ಮತ್ತು ಕಾಲೇಜುಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂಗ್ಲೀಷ್ ಕಲಿತರು ಕನ್ನಡ ಮರೆಯಬಾರದು. ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರಾದ ನಾವು ಕಂಕಣಬದ್ಧರಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಆರ್.ಪಾಟೀಲ್ ಮತ್ತು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ಖೋಬಾಳಕರ್ ಮಾತನಾಡಿದರು.
ಸಮನ್ವಯಾಧಿಕಾರಿ ಬಸವಂತರಾಯ ಜಿಡ್ಡೆ, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್, ಪ್ರಾಧಿಕಾರ ಸಹಾಯಕ ಅಧಿಕಾರಿ ಡಾ.ಮುರುಲೀಧರ್, ಗುರುಶರಣ ಪಾಟೀಲ್ ಕೊರಳ್ಳಿ, ಆಡಳಿತಾಧಿಕಾರಿ ಮಲ್ಲಿನಾಥ ಯಲಶೆಟ್ಟಿ, ಪ್ರಾಚಾರ್ಯ ಅಶೋಕ ರೆಡ್ಡಿ, ನಾಗಣ್ಣ ಟಿ. ಸಲಗರೆ, ಮುಖ್ಯಶಿಕ್ಷಕ ಎಲ್.ಎಸ್.ಬೀದಿ, ಕಲ್ಲಪ್ಪ ಮಂಠಾಳೆ, ಸಿಬಿಎಸ್‌ಸಿ ಶಾಲಾ ಪ್ರಾಚಾರ್ಯ ದೀಪಾ ಎಂ. ನೇಬು ಇತರರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅನೇಕ ಮಹನೀಯರಿಗೆ ಇದೇ ವೇಳೆ ಸನ್ಮಾನಿಸಲಾಯಿತು. ಸಂಸ್ಥೆಯ ಡಾ.ಪ್ರಭು ಖಾನಾಪುರೆ ಸ್ವಾಗತಿಸಿದರು. ವಿಶ್ವನಾಥ ಭಕರೆ, ಸಂಜಯ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.