ಗುಲ್ಬರ್ಗಾ

ಸರ್ಕಾರಿ ವೈದ್ಯ ಕಾಲೇಜು ಆರಂಭಕ್ಕೆ ಸಿದ್ಧತೆ: ಸಚಿವ ಡಾ.ಶರಣಪ್ರಕಾಶ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ನ.25
ಗುಲ್ಬರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ಹೊಂದುವ ಕನಸು ನನಸಾಗಿಸುವತ್ತ ಅಗತ್ಯ ಸಿದ್ಧತೆಗಳು ಸರ್ಕಾರದ ಹಂತದಲ್ಲಿ ಆರಂಭವಾಗಿವೆ. ಈಗಾಗಲೇ ಇಲ್ಲಿರುವ 400 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯ ಜೊತೆಗೇ ಇನ್ನೂ 500 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಹೊಸ ಆಸ್ಪತ್ರೆ ಕಟ್ಟಡ ಪೂರ್ಣಗೊಂಡಿದೆ.
ಈ ಆಸ್ಪತ್ರೆಯನ್ನು ಶೀಘ್ರದಲ್ಲೇ ಜನಾರ್ಪಣೆ ಮಾಡಲಾಗುತ್ತದೆ. ಇದೇ ಆಸ್ಪತ್ರೆಯನ್ನೇ ಸರ್ಕಾರಿ ವೈದ್ಯಕೀಯ ಕಾಲೇಜು ಕ್ಲಿನಿಕಲ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
ಎಂಎಲ್ಸಿ ಅಲ್ಲಂಪ್ರಭು ಪಾಟೀಲ್ ಬೆಳಗಾವಿ ಸುವರ್ಣ ಸೌಧ ಅಧಿವೇಶನದಲ್ಲಿ ವೈದ್ಯಕೀಯ ಕಾಲೇಜುಗಳ ಸೌಲಭ್ಯಗಳ ಕುರಿತಂತೆ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವ ಡಾ.ಶರಣ ಪಾಟೀಲ್ ಶೀಘ್ರವೇ ಹೊಸ ಆಸ್ಪತ್ರೆ ಆರಂಭಿಸುವ ಮೂಲಕ ಗುಲ್ಬರ್ಗ ಸರ್ಕಾರಿ ವೈದ್ಯ ಕಾಲೇಜು ಹೊಂದುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಗಂಭೀರವಾಗಿ ಶುರು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜಿಲ್ಲೆಗೊಂದು ವೈದ್ಯ ಕಾಲೇಜು:  ರಾಜ್ಯದಲ್ಲಿರುವ 30 ಜಿಲ್ಲೆಗಳ ಪೈಕಿ ಯಾವ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ  ಕಾಲೇಜು ಇಲ್ಲವೋ ಅಂತಹ ಜಿಲ್ಲೆಗಳನ್ನು ಗುರುತಿಸಿ ಅಲ್ಲೆಲ್ಲಾ ಹಂತಹಂತವಾಗಿ ಕಾಲೇಜು ಆರಂಭಿಸುವ ಯೋಜನೆ ಇದೆ. ಇದಕ್ಕಾಗಿ ಬರುವ ಬಜೆಟ್‌ನಲ್ಲಿ ಅಗತ್ಯ ಅನುದಾನ ಸಹ ಮೀಸಲಿಡಲಾಗುತ್ತದೆ. ಸರ್ಕಾರ ವೈದ್ಯಕೀಯ ಶಿಕ್ಷಣವನ್ನು ಮಧ್ಯಮ ವರ್ಗಕ್ಕೂ ಕೈಗೆಟುವಂತೆ ಮಾಡುವ ಗುರಿ ಹೊಂದಿದೆ. ಅದಕ್ಕಾಗಿಯೇ ಜಿಲ್ಲೆಗೊಂದು ವೈದ್ಯಕೀಯ ಕಾಲೈಜು ಆರಂಭಿಸುವ ಚಿಂತನೆ ಸರ್ಕಾರದ್ದಾಗಿದೆ ಎಂದು ಹೇಳಿದ್ದಾರೆ.
ಎಂಎಲ್ಸಿ ಅಲ್ಲಂಪ್ರಭು ಪಾಟೀಲರ ಇನ್ನೊಂದು ಪ್ರಶ್ನೆಗೂ ಲಿಖಿತ ಉತ್ತರ ನೀಡಿರುವ ಡಾ.ಶರಣ ಪಾಟೀಲ್ ಯಾದಗಿರಿ ಜಿಲ್ಲೆಯಲ್ಲಿಯೂ 400 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆ ಲಭ್ಯವಿದೆ. ಬರುವ ದಿನಗಲಲ್ಲಿ ಈ ಜಿಲ್ಲೆಗೂ ಸರ್ಕಾರಿ ವೈದ್ಯ ವಿದ್ಯಾಲಯ ಮಂಜೂರು ಮಾಡುವ ದಿಶೆಯಲ್ಲಿ ಸಾರ್ಕರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.