29ರಂದು ಬೆಳಗಾವಿಯಲ್ಲಿ ಪ್ರತಿಭಟನೆ
ಗುಲ್ಬರ್ಗ: ಜಿಲ್ಲೆಯಲ್ಲಿ ತೊಗರಿ ಕಾಶಿ ಆರಂಭವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ ತೊಗರಿಗೆ 6500 ನೀಡಿ ಖದೀರಿಸುವುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತ ಕಿಸಾನ್ ಸಭಾ ಮತ್ತು ಸಿಪಿಐ ಪಕ್ಷಗಳು ನ.29ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸಲು ನಿರ್ಧರಿಸಿವೆ.
ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭಗೊಂಡಿದೆ. ರಾಜ್ಯ ಸರ್ಕಾರ ಗಮನ ಸೆಳೆಯಲು ನ. 29ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಸಿಎಂ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮೌಲಾ ಮುಲ್ಲಾ ಮತ್ತು ಭೀಮಾಶಂಕರ ಮಾಡಿಯಾಳ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತೊಗರಿ ಮಂಡಳಿ ರೈತರ ತೊಗರಿ ಖರೀದಿಗೆ ಮುಂದಾಗಬೇಕು. ರೈತರಿಗೆ ಸಾಲ ವಿತರಿಸಬೇಕು, ಪಂಪಸೆಟ್ಗಳಿಗೆ ಉಚಿತ ವಿದ್ಯುತ್ ಕಲ್ಪಿಸಬೇಕು. ವಿನಾಕಾರಣ ಮನಬಂದಂತೆ ಬಿಲ್ ವಸೂಲಿ ಮಾಡಬಾರದು, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರ ಬೆಳೆ ಹಾಳಾಗಿದೆ. ಕೂಡಲೇ ಅವರಿಗೆ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಹೈನುಗಾರಿಕೆಗೆ ಯುವ ರೈತರಿಗೆ ಸಾಲ ನೀಡಬೇಕು ಮುಂತಾದ ಬೇಡಿಕೆಗಳಿಗೆ ಒತ್ತಾಯಿಸಿ ನ.27ರಿಂದ ರಾಜ್ಯಾದ್ಯಂತ ಧರಣಿ ನಡೆಸಲಾಗುವುದು ಎಂದರು.
ನ.27 ಮತ್ತು 28ರಂದು ಆರಂಭದಲ್ಲಿ ಆಳಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ನ.29ರಂದು ಬೆಳಗಾವಿ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರದ ದಿನಗಳಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಧರಣಿ ಕೈಗೊಳ್ಳಲು ನಿರ್ಧರಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

