ಗುಲ್ಬರ್ಗಾ

ಅಧಿವೇಶನದಲ್ಲಿ ಮರಾಠಿ ಭಾಷಣ: ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಯಾದಗಿರಿ, ನ.25 ಬೆಳಗಾವಿ ಅಧಿವೇಶನದಲ್ಲಿ ಎಂಇಎಸ್ ಶಾಸಕರು ಮರಾಠಿ ಭಾಷೆಯಲ್ಲಿ ಭಾಷಣ ಮಾಡಿರುವುದು ಹಾಗೂ ಮಹಾಮೇಳ ಹಮ್ಮಿಕೊಂಡಿರುವದನ್ನು ಖಂಡಿಸಿ ನಗರದ ಶಾಸ್ತ್ರೀ ಚೌಕದಲ್ಲಿ ಮಧ್ಯಾಹ್ನ 3ಗಂಟೆಗೆ  ಜಿಲ್ಲಾ ಕರವೇ ಕಾರ್ಯಕರ್ತರು ಶಾಸಕರ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾ ಅದ್ಯಕ್ಷ ಟಿ.ಎನ್. ಭೀಮುನಾಯಕ ಮರಾಠಿಗರು ಪದೇ ಪದೇ ಮಹಾಮೇಳ ಹಮ್ಮಿಕೊಳ್ಳುವ ಮೂಲಕ ಕನ್ನಡಿಗರಿಗೆ ಕೆರಳುವಂತೆ ಮಾಡುತ್ತಿದ್ದಾರೆ.
  ಕರವೇ ವತಿಯಿಂದ ಅನೇಕ ಬಾರಿ ಹೋರಾಟದ ಮಾಡಿ ಎಚ್ಚರಿಕೆ ನೀಡುತ್ತಿದ್ದರೂ, ಸರ್ಕಾರ ಮಹಾಮೇಳಕ್ಕೆ ಅನುಮತಿ ನೀಡುತ್ತಿರುವುದನ್ನು ಖಂಡಿಸಿದರು.
ಅವಮಾನ: ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ಶಾಸಕರಾದ ಸಂಬಾಜಿ ಪಾಟೀಲ್ ಮತ್ತು ಅರವಿಂದ ಪಾಟೀಲ್ ಮರಾಠಿಯಲ್ಲಿ ಭಾಷಣ ಮಾಡಿರುವುದು ಕನ್ನಡಕ್ಕೆ ಮಾಡಿದ ಅವಮಾನವಾಗಿದೆ. ಕೂಡಲೇ ಇವರ ಸದಸತ್ವವನ್ನು ಸಭಾಧ್ಯಕ್ಷರು ರದ್ದು ಮಾಡಬೇಕು.
 ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆಗೆ ಕಡಿವಾಣ ಹಾಕಿ ಗಡಿಪಾರು ಮಾಡುವ ಮೂಲಕ ಈ ಸಂಘಟನೆಯನ್ನು ನಿಷೇಧಿಸಬೇಕು.  ಬಂಧಿಸಿರುವ ಪ್ರತಿಭಟನಾನಿರತ ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭೀಮಾಶಂಕರ ಹತ್ತಿಕುಣಿ,ಮಲ್ಲು ವರ್ಕನಳ್ಳಿ,ನಾಗಪ್ಪ ದೇಸಾಯಿ,ಹಣಮಂತ ನಾಯಕ ಮಲ್ಲು ರಾಮುಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ,ಅನೀಲ ಬೇಳಗುಂದಿ, ನಾಗರಾಜ ಶೆಟ್ಟಿಗೇರಿ,ರಾಜು ಪಗಲಾಪೂರ,ಶ್ರೀನಿವಾಸ ಚಾಮನಾಳ್ಳಿ, ಹಣಮಂತ ಅಚ್ಚೋಲಾ, ಮಲ್ಲಣ್ಣ ಮಡಿವಾಳ, ದಶರಥ ರಾಠೋಡ, ವೆಂಕಟೇಶ ದಾಸ, ವಿಶ್ವರಾದ್ಯ ಹಾಗೂ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.