ಒಬ್ಬ ಸೈಫನ್, ಇನ್ನಿಬ್ಬರು ಗೊತ್ತಿಲ್ಲ
ಗುಲ್ಬರ್ಗ: ವಾಗ್ದರಿ ರಿಬ್ಬನಪಲ್ಲಿ ಹೆದ್ದಾರಿ ಭೋಸಗಾ ಕ್ರಾಸ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ.
ಗುಲ್ಬರ್ಗ ಕಡೆಯಿಂದ ಪರಸಿ ತುಂಬಿಕೊಂಡು ಆಳಂದ ಕಡೆಗೆ ಹೊರಟಿದ್ದ ಲಾರಿಗೆ ಹಿಂದಿನಿಂದ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಕ್ಯಾಬಿನಲ್ಲಿದ್ದ ಮೂರರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ದುರಂತದಲ್ಲಿ ಮಹಾರಾಷ್ಟ್ರದ ಸೈಫನ್ ತಂದೆ ಅಹ್ಮದ್ (35) ಮತ್ತು ಇನ್ನಿಬ್ಬರ ಮೃತರ ಹೆಸರು ತಿಳಿದು ಬಂದಿಲ್ಲ. ಅಪಘಾತದಲ್ಲಿ ಮೃತರ ಮುಖ ನುಚ್ಚುಗುಚ್ಚಾದ ಹಿನ್ನೆಲೆಯಲ್ಲಿ ಅವರ ಗುರುತು ಪತ್ತೆಯಾಗಿಲ್ಲ. ತೀವ್ರವಾಗಿ ಗಾಯಗೊಂಡ ಚಾಂದಾಪಾಶಾ ತಂದೆ ಬಾಬುಮಿಯಾ (30) ಎಂಬುವರನ್ನು ಗುಲ್ಬರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಅಮಿತಸಿಂಗ್, ಪ್ರೊಬೆಷನರಿ ಎಸ್ಪಿ ಸಂತೋಷ ಬಾಬು, ಹೆಚ್ಚುವರಿ ಎಸ್ಪಿ ಕಾಶಿನಾತ ತಳಕೇರಿ ಮತ್ತು ಸಿಪಿಐ ರಾಜಣ್ಣ, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಪೊಲೀಸರು ಸಕಾಲಕ್ಕೆ ಸ್ಪಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

