ಗುಲ್ಬರ್ಗಾ

ಅಸ್ಪಾಕ್‌ಗೆ ಕೊಲಂಬೊ ವಿವಿ ಗೌರವ ಡಾಕ್ಟರೇಟ್

Published On :

ಗುಲ್ಬರ್ಗ:  ಗುಲ್ಬರ್ಗ ಮಹಾನಗರ ಪಾಲಿಕೆ ಮಾಜಿ ಮಹಾಪೌರ ಅಸ್ಪಾಕ್ ಅಹ್ಮದ್ ಚುಲಬುಲ್ ಅವರಿಗೆ ಶ್ರೀಲಂಕಾದ ಕೊಲಂಬೊ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಕೊಲಂಬೊ ವಿಶ್ವವಿದ್ಯಾಲಯದ ಕುಲಸಚಿವರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಚುಲಬುಲ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು.

ಇಂದು ನೇರ ಫೋನ್ ಇನ್ ಕಾರ್ಯಕ್ರಮ
ಗುಲ್ಬರ್ಗ: ಗುಲ್ಬರ್ಗ ದೂರದರ್ಶನ ಕೇಂದ್ರದಲ್ಲಿ ನ.27ರಂದು ಸಂಜೆ 5.30 ರಿಂದ 6 ರವರೆಗೆ ರೈತ ಬಾಂಧವರಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. 220491, 220492 ದೂರವಾಣಿ ಸಂಖ್ಯೆಗಳಿಗೆ ರೈತರು ಸಂಪರ್ಕಿಸಬಹುದು ಎಂದು ಕೇಂದ್ರದ ಸಹಾಯಕ ನಿರ್ದೇಶಕ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಇಂದು ಗ್ರಾಪಂ ಕಚೇರಿಗೆ ಮುತ್ತಿಗೆ
ಗುಲ್ಬರ್ಗ: ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಯುವಶಕ್ತಿ ಸೈನ್ಯದ ಮುಖಂಡರು 27ರಂದು ಮಹಾಗಾಂವ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಲಿಂಗರಾಜ ಗುಂಡುರಕರ್ ತಿಳಿಸಿದ್ದಾರೆ.

ಇಂದು ಕಾರ್ಯಾಗಾರ
ಚಿತ್ತಾಪುರ: ತಾಲೂಕಿನ ರಾವೂರ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಶಿಕ್ಷಣ ಸಂಸ್ಥೆಯ ಸಚ್ಚಿದಾನಂದ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ  27ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ಆಸಕ್ತ ಪ್ರೌಢಶಾಲೆ ವಿದ್ಯಾರ್ಥಿಗಳು  ಮಾಹಿತಿಗಾಗಿ ಮೊ. 9590092113 ಇಲ್ಲಿಗೆ ಸಂಪರ್ಕಿಸಲು ಶಿಕ್ಷಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ.

ರಮೇಶ್‌ಗೆ ಡಾಕ್ಟರೇಟ್
ಗುಲ್ಬರ್ಗ:  ರಮೇಶ ತಂದೆ ಮಲ್ಲಿಕಾರ್ಜುನ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ರಮೇಶ ಅವರು ಡಾ. ಬಿರಾದಾರ ಶ್ರೀಶೈಲ್‌ರ ಮಾರ್ಗದರ್ಶನದಲ್ಲಿ 'ಸಗರನಾಡು- ಐತಿಹಾಸಿಕ ಅಧ್ಯಯನ' ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ವಿವಿ ಡಾಕ್ಟರೇಟ್ ಪದವಿ ನೀಡಿದೆ.

ಇಂದು ಧರಣಿ
ಗುಲ್ಬರ್ಗ: ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸಬೇಕು, ಈ ಕಾಯ್ದೆ ಜಾರಿಗಾಗಿ ಒತ್ತಾಯಿಸುತ್ತಿರುವ ನಿಡುಮಾಮಿಡಿ ಶ್ರೀಗಳಿಗೆ ಕೊಲೆ ಬೆದರಿಕೆ ಹಾಕಿರುವ ಕ್ರಮವನ್ನು ಖಂಡಿಸಿ ನ. 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.