ಕಾರ್ಮಿಕ ಸಚಿವರಿಂದ ಸಹಾಯಧನ ಭರವಸೆ
ಸುರಪುರ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಗಾ ಕ್ರಾಸ್ ಬಳಿ ಇತ್ತೀಚೆಗೆ ಕ್ಯಾಂಟರ್ ವಾಹನ ಉರುಳಿ ಮೃತಪಟ್ಟು ತಾಲೂಕಿನ ಉಪ್ಪಲದಿನ್ನಿ ತಾಂಡಾದ 22 ಜನರ ಮೃತ ಕುಟುಂಬಗಳಿಗೆ ಕಾರ್ಮಿಕ ಇಲಾಖೆಯಿಂದ 50000 ಸಹಾಯಧನ ನೀಡುವುದಾಗಿ ಕಾರ್ಮಿಕ ಸಚಿವ ಪರಮೇಶ್ವರ ಭರವಸೆ ನೀಡಿದ್ದಾರೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭ ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ್ ಸೇರಿಕೊಂಡು ಕಾರ್ಮಿಕ ಸಚಿವರನ್ನು ಭೇಟಿಯಾದ ಸಂದರ್ಭ ಈ ಭರವಸೆ ನೀಡಿದರು ಎಂದು ಶಾಸಕ ಆರ್.ವಿ.ಎನ್. ಹೇಳಿದ್ದಾರೆ.
ಮಾರ್ಚ್ ಅಂತ್ಯದವರೆಗೂ ನೀರು ಹರಿಸಿ
ಕೆಂಭಾವಿ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ಈಗ ಸಾಕಷ್ಟು ನೀರಿನ ಪ್ರಮಾಣ ಇದ್ದು ಮಾರ್ಚ್ ಕೊನೆಯ ವಾರದವರೆಗೆ ನೀರು ಹರಿಸಿ ರೈತರ ಹಿತ ಕಾಪಾಡಬೇಕು ಎಂದು ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಪೂರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಎರಡನೇ ಬೆಳೆಗೆ ನೀರು ಬಾರದೆ ಇದ್ದುದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಈ ವರ್ಷ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಜನಪರ ಕಾಳಜಿ ಹೊಂದಿದೆ. ರೈತರ ಬಗ್ಗೆ ಕಾಳಜಿ ಹೊಂದಿದ ಸರ್ಕಾರ ನಾರಾಯಣಪುರ ಜಲಶಯದ ಎರಡೂ ನಾಲೆಗೆ ಮಾರ್ಚ್ ಅಂತ್ಯದವರೆಗೆ ನೀರು ಹರಿಸುವ ವಿಶ್ವಾಸವಿದೆ. ಈ ಬಗ್ಗೆ ಈಗಾಗಲೇ ನಾನು ಜಲ ಸಂಪನ್ಮೂಲ ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ನೀರಿನ ಲಭ್ಯತೆ ಅನುಗುಣವಾಗಿ ನಾಲೆಗೆ ನೀರು ಹರಿಸಿ ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಪ್ರಯತ್ನಿಸಲಿದೆ ಎಂದರು. ಆಲಮಟ್ಟಿಯಲ್ಲಿ ಸಲಹಾ ಸಮಿತಿ ಸಭೆಯಲ್ಲಿ ಮಾ. 10ರವರೆಗೆ ನೀರು ಬಿಡಲು ನಿರ್ಧರಿಸಲಾಗಿದ್ದು, ಇದು ತಾತ್ಕಾಲಿಕವಷ್ಟೆ. ನೀರಿನ ಪ್ರಮಾಣ ಹೆಚ್ಚಾದರೆ ಮಾರ್ಚ್ ಅಂತ್ಯದವರೆಗೆ ನೀರು ಹರಿಸಲಾಗುವುದು ಎನ್ಮಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

