ಪಿಡಿಒ ಅಮಾನತು
ಶಹಾಪುರ: ತಾಲೂಕಿನ ಹೋತಪೇಟ ಮತ್ತು ಮದ್ರಕಿ ಗ್ರಾಪಂ ಪಿಡಿಒ ಇವರನ್ನು ನಿರಂತರ ಗೈರು ಹಾಜರಿ ಹಾಗೂ ಕರ್ತವ್ಯ ಲೋಪ ಪರಿಗಣಿಸಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಎ. ಜಿಲಾನಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸೌಲಭ್ಯ ವಂಚಿತ ಶಾಲಾ ಮಕ್ಕಳು; ಆರೋಪ
ಶಹಾಪುರ: ತಾಲೂಕಿನ ಮೂಡಬೂಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ಯೋಜನೆಗಳನ್ನು ಪೂರೈಸುವಲ್ಲಿ ಮುಖ್ಯ ಗುರುಗಳು ಬೇಜವಾಬ್ದಾರಿ ತೋರುತ್ತಿದ್ದಾರೆ. ಈ ಕುರಿತು ಜಯ ಕರ್ನಾಟಕ ಸಂಘಟನೆ ಮತ್ತು ವಾಲ್ಮೀಕಿ ಸಮಾಜದ ಯುವ ಮುಖಂಡರು ಆರೋಪಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಮನವಿಯನ್ನು ಸಲ್ಲಿಸಿದ್ದಾರೆ. ಈ ಕುರಿತು ಮನವಿಯಲ್ಲಿ ತಿಳಿಸಿದ ಅವರು ಬಿಸಿಯೂಟದಲ್ಲಿ ಗುಣಮಟ್ಟದ ಕೊರತೆ ಕ್ಷೀರಭಾಗ್ಯ ಯೋಜನೆ ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದು, ವಿದ್ಯಾಭ್ಯಾಸದಲ್ಲಿಯು ಗುಣಮಟ್ಟ ಕಾಯ್ದುಕೊಳ್ಳದೇ ಇರುವುದು ಕಂಡು ಬಂದಿದೆ. ಇದಕ್ಕೆ ಮುಖ್ಯ ಗುರುಗಳ ಉದಾಸೀನ ಧೋರಣೆಯೇ ಕಾರಣ. ತಕ್ಷಣವೇ ಅವರ ಮೇಲೆ ಕ್ರಮ ತೆಗೆದುಕೊಂಡು ಮುಡೂಬೂಳ ಸರ್ಕಾರಿ ಶಾಲೆಗೆ ಸೂಕ್ತ ಕಾಯಕಲ್ಪ ನೀಡಬೇಕೆಂದು ಸಂಘಟನೆ ಮಂದಿ ತಿಳಿಸಿದ್ದಾರೆ. ಬಿಇಒ ಕಚೇರಿ ವ್ಯವಸ್ಥಾಪಕ ಅಡಿವ್ಯಾಚಾರ್ಯ ದಿಗ್ಗಾಂವಿ ಮನವಿ ಪತ್ರವನ್ನು ಸ್ವೀಕರಿಸಿದರು. ಜಯ ಕರ್ನಾಟಕ ಸಂಘದ ತಾಲೂಕಾಧ್ಯಕ್ಷ ಅಬ್ದುಲ್ ಹಾದಿಮನಿ, ಸದಾಶಿವ ಮೂದೊಳ, ರವೀಂದ್ರಕುಮಾರ ಇತರರರಿದ್ದರು.
ಕರಡಕಲ್ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರು
ಕೆಂಭಾವಿ: ಪಟ್ಟಣ ಸಮೀಪದ ಕರಡಕಲ್ ಗ್ರಾಪಂಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಸುರಪುರ ತಹಸೀಲ್ದಾರ್ ಅರುಣಕುಮಾರ ಕುಲಕಣರ್ ಸಮ್ಮುಖದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕರಡಕಲ್ ಗ್ರಾಮದ ಮಂಜುಳಾ ಸಂಗಣ್ಣ ಗುಡಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮೀಬಾಯಿ ರುದ್ರಗೌಡ ಮಾಲಿಪಾಟೀಲ ಅವಿರೋಧವಾಗಿ ಆಯ್ಕೆಯಾದರು. ಗ್ರಾಪಂಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಂತರ ಹೊರಗೆ ಕಾಂಗ್ರೇಸ್ ಕಾರ್ಯಕರ್ತರು, ಅಭಿಮಾನಿಗಳು ಪರಸ್ಪರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜಿಪಂ ಸದಸ್ಯ ಸಿದ್ದನಗೌಡ ಪೊಲೀಸ್ ಪಾಟೀಲ, ಮಾಜಿ ಸೈನಿಕ ಮಲ್ಲಣ್ಣ ಮೇಟಿ, ಸಂಗನಗೌಡ ಮರೆಡ್ಡಿ, ಅಧ್ಯಕ್ಷ ಭೀಮಣ್ಣ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

