ಗುಲ್ಬರ್ಗಾ

ಫೋನ್‌ಇನ್ ಇಂದು: ಸೂಚನೆ

Published On :

ಗುಲ್ಬರ್ಗ:  ಗುಲ್ಬರ್ಗ ದೂರದರ್ಶನ ಕೇಂದ್ರದಲ್ಲಿ ನ.28ರಂದು ಸಂಜೆ 6.30ಕ್ಕೆ ನಡೆಯುವ ಜನಸ್ಪಂದನ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಆರೋಗ್ಯಕ್ಕಾಗಿ ಆಯುರ್ವೇದ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಡಾ.ವಿಜಯಲಕ್ಷ್ಮೀ ಹರನೂರಕರ್ ಅವರು ಈ ವಿಷಯ ಕುರಿತು ಮಾತನಾಡಲಿದ್ದಾರೆ. 220491, 220492 ದೂರವಾಣಿ ಸಂಖ್ಯೆಗಳಿಗೆ ವೀಕ್ಷಕರು ಸಂಪರ್ಕಿಸಿ ತಮ್ಮ ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಕೇಂದ್ರದ ಸಹಾಯಕ ನಿರ್ದೇಶಕ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಯುವಜನ ಮೇಳ
ಗುಲ್ಬರ್ಗ:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರ ಮತ್ತು ರಾಜ್ಯ ಯುವ ಪ್ರಶಸ್ತಿ ವಿಜೇತರ ವೇದಿಕೆ ಸಹಯೋಗದಲ್ಲಿ ನ.28ರಂದು ಬೆಳಗ್ಗೆ 11ರಂದು ನಗರದ ಕನ್ನಡ ಭವನದಲ್ಲಿ ಗುಲ್ಬರ್ಗ ತಾಲೂಕು ಯುವಜನ ಮೇಳ ಹಮ್ಮಿಕೊಳ್ಳಲಾಗಿದೆ. ಜೈಕರವೇ ರಾಜ್ಯಾಧ್ಯಕ್ಷ ಅರುಣಕುಮಾರ್ ಪಾಟೀಲ್ ಮೇಳ ಉದ್ಘಾಟಿಸಲಿದ್ದಾರೆ. ವೀರ ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಅಮೃತ ಪಾಟೀಲ್, ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಪ್ರಭುಲಿಂಗ ನೀಲೂರೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ ಬಡಿಗೇರ ಅಧ್ಯಕ್ಷತೆ ವಹಿಸಲಿದ್ದಾರೆ.
ವಿದ್ಯುತ್ ವ್ಯತ್ಯಯ
ಗುಲ್ಬರ್ಗ: ನಗರದ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 11 ಕೆವಿ ನೃಪತುಂಗ ಫೀಡರ್ ಮೇಲೆ ನ.28ರಂದು ಬೆ.10ರಿಂದ ಸಂಜೆ 5ರವರೆಗೆ 11 ಕೆವಿ ಮಾರ್ಗ ವಿಸ್ತರಣೆ, ಹೆಚ್ಚುವರಿ ಪರಿವರ್ತಕ ಅಳವಡಿಕೆ ಹಿನ್ನೆಲೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜಿಡಿಎ ಕೋಟನೂರ ಪ್ರದೇಶ, ಓಝಾ ಲೇಔಟ್, ಧನಶೆಟ್ಟಿ ನಗರ, ಸ್ಲಂ ಬೋರ್ಡ್ ವಸತಿ ಗೃಹಗಳು ಹಾಗೂ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರ ಬಡಾವಣೆಗಳ ವಿದ್ಯುತ್  ಗ್ರಾಹಕರು ಜೆಸ್ಕಾಂದೊಂದಿಗೆ  ಸಹಕರಿಸಲು ಗುಲ್ಬರ್ಗ ಕಾರ್ಯ, ಪಾಲನೆ ನಗರ ವಿಭಾಗ ಕೋರಿದೆ.
ಡಿಕ್ಕಿ: ವ್ಯಕ್ತಿ ಸಾವು
ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣ ಬಳಿ ಕಳೆದ ಶನಿವಾರ ಆಟೋ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮಂಗಳವಾರ ಮೃತಪಟ್ಟಿದ್ದಾನೆಂದು ಚಿಂಚೋಳಿ ಸಬ್ ಇನ್ಸ್‌ಪೆಕ್ಟರ್ ಶಿವಶಂಕರ ಸಾಹು ತಿಳಿಸಿದ್ದಾರೆ. ಪಟ್ಟಣದ ನಿವಾಸಿ ಮಂಜೂರ ಪಟೇಲ್ ಮಸ್ತಾನ ಪಟೇಲ(45) ಮೃತಪಟ್ಟವರು. ಅಂಗಡಿಯೊಂದರಿಂದ ತೆರಳುತ್ತಿದ್ದಾಗ ಆಟೋ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದರಿಂದ ಹೈದ್ರಾಬಾದ್‌ನ ಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.