ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ
ಅಫಜಲ್ಪುರ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ತಾಲೂಕು ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು ಬುಧವಾರ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಪ್ರಾಣದ ಜತೆ ಚೆಲ್ಲಾಟವಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೂಡಲೇ ವಿಸರ್ಜನೆಯಾಗಬೇಕು. ರೈತರ ಆಶೋತ್ತರಗಳಿಗೆ ಸ್ಪಂದಿಸುವ ಜನಪ್ರತಿನಿಧಿಗಳು ಸರ್ಕಾರ ಮಾಡಬೇಕೆಂದು ಸಂಘದ ಅಧ್ಯಕ್ಷ ರಮೇಶ ಹೂಗಾರ ಒತ್ತಾಯಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿಗೊಳಿಸುವ ಹುಸಿ ಭರವಸೆ ನೀಡಿತ್ತು. ಇನ್ನೂ ಬೆಲೆ ಘೋಷಣೆ ಮಾಡದೆ ಕೆಲವು ಕಡೆಯಲ್ಲಿ ನಡೆಯುತ್ತಿರುವ ಕಾರ್ಖಾನೆಗಳ ಉಪಟಳವನ್ನು ತಡೆಯಲು ವಿಫಲವಾಗಿದೆ.
ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಆದ್ದರಿಂದ ಸರ್ಕಾರ ವಚಾಗೊಳ್ಳಬೇಕು. ಕಬ್ಬಿನ ಬೆಂಬಲ ಬೆಲೆಗಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ 5 ಲಕ್ಷ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು. ಕಬ್ಬಿಗೆ ಬೆಂಬಲ ಬೆಲೆ 3 ಸಾವಿರ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಅಫಜಲ್ಪುರ ಪಟ್ಟಣ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಜೈಕರವೇ ತಾಲೂಕಾಧ್ಯಕ್ಷ ಸುರೇಶ ಅವಟೆ, ಮಲ್ಲು ಬಳೂರ್ಗಿ, ಗಂಗಾಧರ ಕರಬಂಟನಾಳ, ಯಮನಪ್ಪ ಭಾಸಗಿ, ಭೀಮಾಶಂಕರ ದಾನಮಗುಡಿ, ಭೀಮರಾಯಗೌಡ ಪಾಟೀಲ್, ಅಂಬರೀಷ ಮೇತ್ರೆ, ವಿಠ್ಠಲ್ ಜಗಳಗೊಂಡ, ಬಸ್ಸು ಕಿಣಗಿ, ಗುಂಡು ಅಂಕಲಗಿ, ಸುನೀಲ್ ದೊಡ್ಮನಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

