ಇಂದು ಉಪನ್ಯಾಸ
ಗುರುಮಠಕಲ್: ಸಗರನಾಡು ಸೇವಾ ಪ್ರತಿಷ್ಠಾನ ಸುರಪುರ ಇವರ ವತಿಯಿಂದ ಗುರುಮಠಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತಿ-ಮಾಹಿತಿ ಕನ್ನಡ ಜಾಗೃತಿ ಸಾಪ್ತಾಹಿಕ ಸರಣಿ ಮಾಲಿಕೆಯ ಉದ್ಘಾಟನೆ ಹಾಗೂ ಕನ್ನಡದ ಕಣ್ವ ಬಿ.ಎಂ.ಶ್ರೀ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನ.29ರಂದು ಬೆಳ್ಳಿಗೆ 10 ಗಂಟೆಗೆ ನಡೆಯಲ್ಲಿದೆ. ಕಾರ್ಯಕ್ರಮವನ್ನು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಉದ್ಘಾಟಿಸುವರು. ಸಾಹಿತಿಗಳಾದ ವೆಂಕಟರಾವ್ ಕುಲಕರ್ಣಿಯವರು ಉಪನ್ಯಾಸ ನಿಡಲ್ಲಿದ್ದಾರೆ. ಗುರುಮಠಕಲ್ ಖಾಸಮಠದ ಪೀಠಾಧಿಪತಿ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು ಕಾಲೇಜಿನ ಪ್ರಾಂಶುಪಾಲ ಎಂ.ಎಸ್. ಯಾಳಗಿಯವರು ಅಧ್ಯಕ್ಷತೆ ವಹಿಸುವರು ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿಯವರು ತಿಳಿಸಿದ್ದಾರೆ.
ಇಂದು ದೇಶಪಾಂಡೆಗೆ ಷರೀಫ್ ಪ್ರಶಸ್ತಿ
ಹುಣಸಗಿ: ಬೆಂಗಳೂರಿನ ಶಿವಾಜಿ ನಗರದ ಸಮೀಪವಿರುವ ಸಂತ ಶಿಶುವಿನಾಳ ಷರೀಫರ ವೇದಿಕೆಯಲ್ಲಿ ಇಂದು ಕರವೇ ವತಿಯಿಂದ ನಡೆಯಲಿರುವ ರಾಜ್ಯ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಸಂತ ಶಿಶುವಿನಾಳ ಷರೀಫ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹುಣಸಗಿಯ ವರದಿಗಾರ ವೆಂಕಟಗಿರಿ ದೇಶಪಾಂಡೆ ಇಂದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಕರವೇಯ ಬಸವರಾಜ ಪಡಕೋಟೆ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ವಹಿಸಿಕೊಳ್ಳುವರು. ಉದ್ಘಾಟನೆಯನ್ನು ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಮಾಡಲಿದ್ದಾರೆ. ಪ್ರಶಸ್ತಿಯನ್ನು ಬೆಂಗಳೂರು ದೂರದರ್ಶನ ಕೇಂದ್ರದ ಹೆಚ್ಚುವರಿ ನಿರ್ದೇಶಕ ಮಹೇಶ ಜೋಷಿ ನೀಡಲಿದ್ದಾರೆ ಎಂದು ಪಡಕೋಟೆ ತಿಳಿಸದ್ದಾರೆ.
ಎಂಇಎಸ್ ಶಾಸಕರ ಗಡಿಪಾರಿಗೆ ಆಗ್ರಹ
ಗುರುಮಠಕಲ್; ಬೆಳಗಾವಿಯ ಸುವರ್ಣ ಸೌಧದಲ್ಲಿ ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನ ಮರಾಠಿಯಲ್ಲಿ ಭಾಷಣ ಮಾಡಿದ ಎಂ.ಇ.ಎಸ್ಶಾಸಕರಾದ ಸಂಬಾಜಿ ಪಾಟೀಲಲ್ಮತ್ತು ಅರವಿಂದ ಪಾಟೀಲ್ ಅವರ ಶಾಸಕತ್ವವನ್ನು ಕೂಡಲೇ ರದ್ದುಗೊಳಿಸಿ ಅವರನ್ನು ಗಡಿಪಾರು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಹೈ.ಕ. ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಯುವಘಟಕದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಸರಕಾರವನ್ನು ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ದಿನವೇ ಎಂಇಎಸ್ ಮುಖಂಡರು ಮಹಾಮೇಳವಾ ನಡೆಸುವ ಮೂಲಕ ಕನ್ನಡದ ಮನಸ್ಸುಗಳನ್ನು ಕೆರಳಿಸಿದೆ. ರಾಜ್ಯದಲ್ಲಿ ಎಂ.ಇ.ಎಸ್.ಸಂಘಟನೆಯನ್ನು ಸಂಪೂರ್ಣ ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

