ಗುಲ್ಬರ್ಗಾ

ಗುಲ್ಬರ್ಗ ತಾಲೂಕಿನ ಮಹಾಗಾಂವ ಕ್ರಾಸ್ ಬಳಿ ಅಪಘಾತ; ಐವರು ಸಾವು

Published On :

ಗುಲ್ಬರ್ಗ: ಲಾರಿ ಮತ್ತು ಟವೇರಾ ನಡುವೆ ಡಿಕ್ಕಿ ಸಂಭವಿಸಿ ಟವೇರಾದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಗುಲ್ಬರ್ಗ ತಾಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಗುರುವಾರ ತಡರಾತ್ರಿ 12.15ರ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಿಟ್ಟಾ ಗ್ರಾಮದ ನಾಗನ್ನಾಥರೆಡ್ಡಿ(50), ನೀಲಮ್ಮ(60), ವಿಮಲಾ(52), ಅವಿನಾಶ (26) ಮತ್ತು ಮಹೇಶ(28) ಎಂದು ಗುರುತಿಸಲಾಗಿದೆ. ಅಲ್ಲದೆ, ನಾಗರೆಡ್ಡಿ(31), ಸಂಜೀವರೆಡ್ಡಿ ಕೋನರೆಡ್ಡಿ(55), ಮುಕುಂದರೆಡ್ಡಿ(65), ಗುರುನಾಥರೆಡ್ಡಿ(57) ಎಂಬುವರು ಗಾಯಗೊಂಡಿದ್ದು, ಅವರು ಗುಲ್ಬರ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಗುಲ್ಬರ್ಗದ ಲಾಹೋಟಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಸಂಬಂಧಿಕೊಬ್ಬರ ಮದುವೆ ಸಮಾರಂಭ ಮುಗಿಸಿಕೊಂಡು ಬಸವಕಲ್ಯಾಣ ತಾಲೂಕಿನ ಚಿಟ್ಟಾ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿದು ಎಸ್ಪಿ ಅಮಿತ್‌ಸಿಂಗ್, ಹೆಚ್ಚುವರಿ ಎಸ್ಪಿ ಕಾಶಿನಾಥ ತಳಕೇರಿ, ಗ್ರಾಮೀಣ ಎಎಸ್ಪಿ ಸಂತೋಷ ಬಾಬು, ಗ್ರಾಮೀಣ ಸಿಪಿಐ ರಾಜಣ್ಣ, ಮಹಾಗಾಂವ ಪಿಎಸ್‌ಐ ಬಾಪುಗೌಡ ಪಾಟೀಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.