ಗುಲ್ಬರ್ಗಾ

'ಪಾಶ್ಚಾತ್ಯ ಸಂಸ್ಕೃತಿ ಬೇಡ'

Published On :

ಗುಲ್ಬರ್ಗ: ಇಲ್ಲಿಗೆ ಸಮೀಪದ ಹೊನ್ನಕಿರಣಗಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗುಲ್ಬರ್ಗ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ಸಾನ್ನಿಧ್ಯ ವಹಿಸಿ ಮಾತನಾಡಿದ ರಾಚೋಟೇಶ್ವರ ಮಠದ ಪೀಠಾಧಿಪತಿ ಚಂದ್ರಗುಂಡ ಶಿವಾಚಾರ್ಯರು, ಇಂದು ಮಹಿಳೆಯರ ಮೇಲೆ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಅದಕ್ಕೆ ಪಾಶ್ಚಾತ್ಯ ಸಂಸ್ಕೃತಿ ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ನ್ಯಾಯವಾದಿಗಳಾದ ಹುಲೆಪ್ಪ ಹೇರೂರ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪಾಪಮ್ಮ ಹೆಬ್ಬಾಳಕರ್ ಸಮಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ಮಾತನಾಡಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಕಾಂತಲಕ್ಷ್ಮಿ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಶಿವಯೋಗಪ್ಪ ವಗ್ದರ್ಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣಮಂತರಾಯ ತುಪ್ಪದ, ಕನ್ನಡ ಸಾಹಿತ್ಯ ಪರಿಷತ್ ವಲಯ ಅಧ್ಯಕ್ಷ ಗುರುಬಸಪ್ಪ ಸಜ್ಜನ ಶೆಟ್ಟಿ, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಶರಣಪ್ಪ ಬುಸ್ಸಾ, ಎಸ್.ಎಸ್.ಬೆಳ್ಳಿ, ಶಿವಪ್ಪ ಜುಲ್ಪಿ, ಶಾಂತಪ್ಪ ತುಪ್ಪದ, ಚನ್ನಬಸಪ್ಪ ಹಳ್ಳಿ, ಶರಣಯ್ಯ ಮಠ, ಬಸಯ್ಯಸ್ವಾಮಿ ಕಡಿಹಳ್ಳಿ, ಇಮಾಮ್ ಪಟೇಲ್ ತಿಳಗೂಳ, ಸಿದ್ದಯ್ಯಸ್ವಾಮಿ, ಸಿದ್ದಮಲ್ಲಯ್ಯ, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘ ಸದಸ್ಯರು, ಗ್ರಾಮ ಮಹಿಳೆಯರು ಭಾಗವಹಿಸಿದ್ದರು. ಶಾಂತಪ್ಪ ಬೆಣ್ಣೂರ ಮತ್ತು ಮುನಯ್ಯಸ್ವಾಮಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಕರಿಬಸವೇಶ್ವರ ಶಾಲೆ ವಿದ್ಯಾರ್ಥಿ ಸಿದ್ದಯ್ಯ ಪ್ರಾರ್ಥನೆ ಗೀತೆ ಹಾಡಿದರು. ಆಶಾಲತಾ ಎಂ. ಚವ್ಹಾಣ ಕಾರ್ಯಕ್ರಮ ನಿರೂಪಿಸಿ, ಅಕ್ಕನಾಗಮ್ಮ ದಯಾಮಣಿ ಸ್ವಾಗತಿಸಿ, ನಿಂಗಮ್ಮ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.