ಹಿಂಗಾರು ಜೋಳ ಸ್ಪರ್ಧೆ: ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
ಗುಲ್ಬರ್ಗ: ರಾಜ್ಯದ ಕೃಷಿ ಉತ್ಪಾದನೆ ಗಣನೀಯ ಹೆಚ್ಚಳವಾಗಲು ರೈತರ ಶ್ರಮ ಮತ್ತು ಸಕ್ರೀಯ ಪಾಲುಗಾರಿಕೆ ಕಾರಣವಾಗಿದೆ. ಇಂತಹ ರೈತರನ್ನು ಗುರುತಿಸಲು ರಾಜ್ಯ ಜಿಲ್ಲಾ ಹಾಗೂ ತಾಲೂಕುಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಲಾಗುವುದು. ಈ ಯೋಜನೆಯಡಿ ವಿವಿಧ ಹಂತಗಳಲ್ಲಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ 3 ಬಹುಮಾನಗಳನ್ನು ನೀಡಲಾಗುವುದು.
ತಾಲೂಕಿನ ರೈತರಿಗಾಗಿ ತಾಲೂಕುಮಟ್ಟದ ಸ್ಪರ್ಧೆಗೆ ಹಿಂಗಾರಿ ಜೋಳ ಸ್ಪರ್ಧೆ ಏರ್ಪಡಿಸಲಾಗಿದೆ. ರೈತರಿಂದ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.30 ಕೊನೆ ದಿನ.
ಗುಲ್ಬರ್ಗ ತಾಲೂಕುಮಟ್ಟದ ಸ್ಪರ್ಧೆಗೆ ಮೊದಲನೇ ಬಹುಮಾನ 10000, 2ನೇ ಬಹುಮಾನ 5000 ಮತ್ತು 3ನೇ ಬಹುಮಾನ 3000 ಇರುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ರೈತರು ಸ್ಪರ್ಧೆ ಶುಲ್ಕ ಸಾಮಾನ್ಯ ರೈತರು 100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರು 25 ಪಾವತಿಸಬೇಕು. ಭಾಗವಹಿಸುವವರು ನಮೂದಿತ ಅರ್ಜಿಯೊಂದಿಗೆ ಪಹಣಿ ಪತ್ರಿಕೆ, ಗುರುತಿನ ಚೀಟಿ, ಪರಿಶಿಷ್ಟ ವರ್ಗವಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ತಮ್ಮ ರೈತ ಸಂಪರ್ಕ ಕೇಂದ್ರ ಮುಖಾಂತರ ಅಥವಾ ನೇರವಾಗಿ ಅರ್ಜಿ ಸಲ್ಲಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಕಟಾವಿಗೆ 1 ವಾರ ಮುಂಚಿತ ಕಟಾವು ದಿನಾಂಕವನ್ನು ತಿಳಿಸಬೇಕು.
ಸ್ಪರ್ಧೆಗೆ ಅಳವಡಿಸಿದ ತಾಕು ಒಣಬೇಸಾಯದಲ್ಲಿ ಬೆಳೆದಿರಬೇಕು. ಅಳವಡಿಸಿದ ಪ್ಲಾಟು ಯಾವುದೇ ಪ್ರಾತ್ಯಕ್ಷಿಕೆ, ಪ್ರದರ್ಶನಕ್ಕಾಗಿ ಬೆಳೆದದ್ದಾಗಿರಬಾರದು. ತಾಲೂಕಿನ ರೈತರು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಅಥವಾ ಸದರಿ ಕಚೇರಿ ಇಲ್ಲವೇ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

