ಗುಲ್ಬರ್ಗಾ

9 ಕೋಟಿ ಆರ್ಥಿಕ ವ್ಯವಹಾರ: ಶಾಸಕ ಬಿಆರ್‌ಪಿ ಶ್ಲಾಘನೆ

Published On :

ಆಳಂದ:  ವಿಭಾಗಮಟ್ಟದಲ್ಲೇ ಆಳಂದ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘವು ಸುಮಾರು 9 ಕೋಟಿ ವ್ಯವಹಾರದ ನಡೆಸಿದ ಕಾರ್ಯ ಶ್ಲಾಘನೀಯ ಎಂದು ಶಾಸಕ ಬಿ.ಆರ್. ಪಾಟೀಲ್ ಹೇಳಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ 20ನೇ ವಾರ್ಷಿಕ ವಿಶೇಷ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು,  ಶಾಸಕರು ಮಾಡುವ ಕೆಲಸ ಬಹಳ ಇದೆ. ಶಿಕ್ಷಕರು ಪ್ರಾಮಾಣಿಕತೆ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದಲ್ಲಿ ನನ್ನ ಸಹಕಾರ ಇದ್ದೆ ಇರುತ್ತದೆ. ಸಂಘದ ಪ್ರತಿಯೊಬ್ಬ ಸದಸ್ಯರು ಸಹಕಾರ ಸೂತ್ರಕ್ಕೆ ಬದ್ಧವಾಗಿದ್ದರೆ ಸಾಲ ಪಡೆದವರ ವಿರುದ್ಧ ಕೋರ್ಟಿಗೆ ಅಲೆದಾಟ ತಪ್ಪಿಸಿ ಖರ್ಚು ಕಡಿಮೆ ಮಾಡಬಹುದು ಎಂದರು.
ಗುಲ್ಬರ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶರಣಬಸಪ್ಪ ಬೆಣ್ಣೂರ್, ಸಂಘದ ಸದಸ್ಯರಿಗೆ ಸಲಹೆ ಸೂಚನೆಗಳು ನೀಡಿದರೆ, ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ಕೋಬಾಳಕರ್, ಶಿಕ್ಷಕರು ತಮ್ಮ ಆರ್ಥಿಕ ವ್ಯವಹಾರದ ಜತೆಗೆ ಶಾಲಾ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.
ಶಿವಶರಣಪ್ಪಾ ಪಾಟೀಲ್ ಹಳ್ಳಿಸಲಗರ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಬಸವರಾಜ ವಾಲಿ, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್, ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಕಾಮಶೆಟ್ಟಿ, ಸಂಘದ ಅವಿನಾಶ ಬಿರಾದಾರ, ವಿಕ್ರಂ ಗಂಗನೆ, ಶಾಂತಪ್ಪ ಜಕ್ಕಾಣಿ, ಅಶೋಕ ಡಿಗ್ಗಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.