ಇಂದು ಕೇಂದ್ರೀಯ ವಿವಿ ನೂತನ ಕ್ಯಾಂಪಸ್ ಉದ್ಘಾಟನೆ
ಗುಲ್ಬರ್ಗ: ಗುಲ್ಬರ್ಗದಲ್ಲಿ 2009ರಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ಕೇಂದ್ರೀಯ ವಿವಿ ನೂತನ ಕ್ಯಾಂಪಸ್ ಉದ್ಘಾಟನೆ ನ.30ರಂದು ನಡೆಯಲಿದೆ. ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ- ಸುಂಟನೂರು ಪ್ರಾಂತದಲ್ಲಿರುವ 621 ಎಕರೆ ಪ್ರದೇಶದಲ್ಲಿ 243 ಕೋಟಿ ವೆಚ್ಚದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ನಿರ್ಮಾಣವಾಗುತ್ತಿದೆ.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ. ಎಂ.ಎಂ. ಪಲ್ಲಂರಾಜು ನೂತನ ಕ್ಯಾಂಪಸ್, ಸಿಎಂ ಸಿದ್ದರಾಮಯ್ಯ ಅವರು ಶೈಕ್ಷಣಿಕ ಸಮುಚ್ಚಯ-1, ರೇಲ್ವೆ ಖಾತೆ ಸಚಿವ ಡಾ. ಖರ್ಗೆ ಆಡಳಿತ ಕಚೇರಿ ಕಟ್ಟಡ, ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅವರು ಇನ್ನೊಂದು ಶೈಕ್ಷಣಿಕ ಸಮುಚ್ಚಯ ಮತ್ತು ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಹಾಸ್ಟೆಲ್ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಕೇಂದ್ರೀಯ ವಿವಿ ಕುಲಾಧಿಪತಿ ಪ್ರೊ. ಅನಂತಮೂರ್ತಿ ಅವರು ಅಧ್ಯಕ್ಷತೆ ವಹಿಸುವರು.
ಮಾಲಿನ್ಯ ಮುಕ್ತ ಕ್ಯಾಂಪಸ್: ಕ್ಯಾಂಪಸ್‌ನಲ್ಲಿ ಬ್ಯಾಟರಿ ಚಾಲಿತ ವಾಹನಗಳನ್ನೇ ಬಳಸಲು ವಿವಿ ನಿರ್ಧರಿಸಿದ್ದರಿಂದ ಕ್ಯಾಂಪಸ್ ಮಾಲಿನ್ಯ ಮುಕ್ತವಾಗಲಿದೆ. ನಗರ ಸಾರಿಗೆ ಸೇರಿದಂತೆ ಎಲ್ಲ ವಾಹನಗಳನ್ನು ಕ್ಯಾಂಪಸ್ ಹೊರಗಡೆಯೇ ನಿಲುಗಡೆ ಮಾಡಲಾಗುತ್ತದೆ. ಕ್ಯಾಂಪಸ್ ಒಳಗಡೆ ಬ್ಯಾಟರಿ ಚಾಲಿತ ವಾಹನ ಸೌಕರ್ಯವಿರಲಿದೆ.
ಇದಲ್ಲದೆ ನೀರು ನಿರ್ವರ್ಹಣೆ, ಮಳೆನೀರಿನ ಕೊಯ್ಲು, ನೀರಿನ ಮರು ಬಳಕೆಯಂತಹ ನವೀನ ವಿಧಾನಗಳನ್ನು ಹೆಚ್ಚು ಅಳವಡಿಸಿಕೊಂಡು ವಿವಿ ನೀರಿನ ಕೊರತೆಯಿಂದ ಹೊರಬರುವ ನಿಟ್ಟಿನಲ್ಲಿ ಪ್ರಯತ್ನಿಸಲಿದೆ ಎಂದು ಕುಲಪತಿ ಡಾ. ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

