ಯುವಚೇತನ, ಪ್ರೇರಣಾ ತರಬೇತಿ ಶಿಬಿರಕ್ಕೆ ಚಾಲನೆ
ಗುಲ್ಬರ್ಗ: ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್ಟಿಪಿ ಯೋಜನೆಯಡಿ ಎಸ್ಟಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ 10 ದಿನಗಳ ಕಾಲ ಹಮ್ಮಿಕೊಳ್ಳಲಾದ ಯುವಚೇತನ ಹಾಗೂ ಯುವ ಪ್ರೇರಣಾ ತರಬೇತಿ ಶಿಬಿರಕ್ಕೆ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಸಭಾ ಭವನದಲ್ಲಿ ಇತ್ತೀಚೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಅಧ್ಯಕ್ಷ ರಮೇಶ ಮರಗೋಳ, ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪ್ರಥಮ ತರಬೇತಿ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಸಾಮರ್ಥ್ಯ ಸಬಲೀಕರಣ, ಜೀವನ ಕೌಶಲ್ಯ, ಗುರಿ ನಿರ್ಧಾರ, ಆತ್ಮಸ್ಥೈರ್ಯ, ನಾಯಕತ್ವ ಗುಣಗಳು, ನೀವು ಖಂಡಿತವಾದಿಗಳೆ, ಯುವ ಮುಂದಾಳತ್ವ, ವಿವಿಧ ಇಲಾಖೆಗಳ ಸೌಲಭ್ಯಗಳ ಮಾಹಿತಿ ಸೇರಿದಂತೆ ಒಟ್ಟು 32 ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಸಾಮಾಜಿಕ, ಬೌದ್ಧಿಕ, ಮಾನಸಿಕ ಹಾಗೂ ದೈಹಿಕ ವಿಕಸನಕ್ಕೆ ಈ ತರಬೇತಿ ಉಪಯುಕ್ತವಾಗಿದ್ದು, ಇದರ ಜೊತೆಗೆ ವಿವಿಧ ಕ್ರೀಡೆಗಳ ತರಬೇತಿ ನೀಡಲಾಗುತ್ತಿದೆ ಎಂದರು.
15-35 ವಯೋವಾನದ ಎಸ್ಟಿ ವರ್ಗದ 100 ಶಿಬಿರಾರ್ಥಿಗಳ ನೋಂದಣಿ ಮಾಡಿಕೊಂಡು ತರಬೇತಿಗಳನ್ನು ಏರ್ಪಡಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಲ್ಲಿ ಅವರನ್ನೂ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರತಿಭಾ ಹಿರೇಮಠ ಹಾಗೂ ಪ್ರಿಯಾಂಕಾ ನಾಗೂರ ಅವರು ತರಬೇತಿ ನೀಡಲಿದ್ದು, ಶಿವಕುಮಾರ್ ಸ್ವಾಮಿ ಅವರು ಶಿಬಿರಾಧಿಕಾರಿಗಳಾಗಿ ಮೇಲುಸ್ತುವಾರಿಯನ್ನು ನೋಡಿಕೊಳ್ಳುವರು.
ಶಾಸಕ ದತ್ತಾತ್ರೇಯ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಅಶೋಕ ಸಾವಳೇಶ್ವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

