ಅಂಚೆ ಮತ ಪತ್ರ ಸಲ್ಲಿಸಲು ಇಂದು ಕೊನೆಯ ದಿನ
ಗುಲ್ಬರ್ಗ: ಲೋಕಸಭಾ ಚುನಾವಣಾ ಕರ್ತವ್ಯದಲ್ಲಿ ನಿಯೋಜಿಸಲಾದ ಅಧಿಕಾರಿ, ಸಿಬ್ಬಂದಿ ತಮ್ಮ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತ ಪತ್ರ ಹಾಗೂ ಚುನಾವಣಾ ಕರ್ತವ್ಯ ಪ್ರಮಾಣ ಪತ್ರಗಳಿಗಾಗಿ ನಮೂನೆ 12 ಮತ್ತು 12ಎ ಪತ್ರಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಪ್ರಥಮ ತರಬೇತಿ ದಿನದಂದು ಸಲ್ಲಿಸಲು ತಿಳಿಸಲಾಗಿತ್ತು. ಇದುವರೆಗೆ ನಮೂನೆ 12 ಮತ್ತು 12ಎ ಪ್ರಮಾಣ ಪತ್ರಗಳನ್ನು ಭರ್ತಿ ಮಾಡಿ ಸಲ್ಲಿಸದೇ ಇರುವವರು ಏಪ್ರಿಲ್ 3ರ ಸಂಜೆ 5 ಗಂಟೆಯೊಳಗೆ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಲು ತಿಳಿಸಲಾಗಿದೆ. ಗುಲ್ಬರ್ಗ(ದಕ್ಷಿಣ) ಹಾಗೂ ಗುಲ್ಬರ್ಗ (ಉತ್ತರ) ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾದ ಅಧಿಕಾರಿ, ಸಿಬ್ಬಂದಿ ನಮೂನೆ 12 ಮತ್ತು 12 ಎ ಪ್ರಮಾಣ ಪತ್ರಗಳನ್ನು ಗುಲ್ಬರ್ಗ ಮಹಾನಗರ ಪಾಲಿಕೆ ಚುನಾವಣಾ ಶಾಖೆಯಲ್ಲಿ ಸಲ್ಲಿಸಲು ತಿಳಿಸಲಾಗಿದೆ. ತಡವಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ: 745 ಲೀ. ಮದ್ಯ ವಶ
ಗುಲ್ಬರ್ಗ:ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಏಪ್ರಿಲ್ 2ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಒಟ್ಟು 69 ಪ್ರಕರಣಗಳನ್ನು ದಾಖಲಿಸಲಾಗಿದ್ದು, 745.98 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 64 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಏ.2ರಂದು ಅಬಕಾರಿ ಇಲಾಖೆಯಿಂದ 4 ಪ್ರಕರಣ ದಾಖಲಿಸಿದ್ದು, 5.19 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ದಾಖಲಿಸಿದ ಒಟ್ಟು 69 ಪ್ರಕರಣಗಳಲ್ಲಿ ಅಬಕಾರಿ ಇಲಾಖೆಯಿಂದ ದಾಖಲಿಸಿದ 57 ಪ್ರಕರಣಗಳಲ್ಲಿ 541.70 ಲೀಟರ್ ಮದ್ಯ ಹಾಗೂ 3.60 ಕೆ.ಜಿ.ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಹಾಗೂ ಪೊಲೀಸ್ ಇಲಾಖೆಯಿಂದ ದಾಖಲಿಸಿದ 12 ಪ್ರಕರಣಗಳಿಂದ 204.28 ಲೀಟರ್ ಮದ್ಯ ಹಾಗೂ 1.5 ಕೆ.ಜಿ ಸಿಎಚ್ ಪೌಡರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

