ಚಿಂಚೋಳಿ ಬಿಜೆಪಿಲ್ಲಿ ಭಿನ್ನಮತ
ಚಿಂಚೋಳಿ: ಬೀದರ್ ಲೋಕಸಭಾ ಮತಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತು ಕಾರ್ಯಕರ್ತರ ಮಧ್ಯೆ ಭಿನ್ನಮತ ಸ್ಫೋಟಗೊಂಡಿದ್ದು ಬಿಜೆಪಿ ಚುನಾವಣಾ ವೀಕ್ಷಕರ ಮುಂದೆ ಮಾತಿನ ಚಕಮಕಿ ನಡೆದಿದೆ.
ಇತ್ತೀಚೆಗೆ ಕೆಜೆಪಿಯಿಂದ ಬಿಜೆಪಿಗೆ ಸೇರ್ಪಡೆಗೊಂಡ ಕೆಲವು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಹೆಚ್ಚಾಗಿ ಗುರುತಿಸಿಕೊಂಡ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದ್ದಾರೆಂದು ಚುನಾವಣಾ ಉಸ್ತುವಾರಿ ಪ್ರಮುಖರಾದ ವಿದ್ಯಾಸಾಗರ ಶಾಬಾದಿ, ಮಹಾಂತಗೌಡ ಪಾಟೀಲ್, ಅಶೋಕ ಪಾಟೀಲ್, ಅಶೋಕ ಬಗಲಿ, ಆರೆಸ್ಸೆಸ್ ಮುಖಂಡ ರಘುನಂದನಜೀ, ಶ್ರೀಧರ ಪಾಟೀಲ್, ರಮೇಶ ಯಾಕಾಪುರ ಅವರ ಸಮ್ಮುಖದಲ್ಲಿಯೇ ತಾಲೂಕು ಬಿಜೆಪಿ ಅಧ್ಯಕ್ಷ ಶಾಮಸುಂದರ ಪವಾರ ಅವರ ನಿರ್ಲಕ್ಷತನ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಯುವ ಬಿಜೆಪಿ ಕಾರ್ಯಕರ್ತರು ವಿವರಿಸಿದರು. ಬಿಜೆಪಿ ಅಭ್ಯರ್ಥಿ ಭಗವಂತ ಖುಬಾ ಪರವಾಗಿ ಮತಯಾಚಿಸದೇ ಭಿನ್ನಮತ ಮುಖಂಡರೊಂದಿಗೆ ಶಾಮೀಲಾಗಿದ್ದಾರೆ. ಪಕ್ಷದ ಕಚೇರಿಗೆ ಬರುವ ಗ್ರಾಮೀಣ ಯುವ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಲಕ್ಷಿಸುತ್ತಿದ್ದಾರೆಂದು ಚುನಾವಣಾ ಉಸ್ತುವಾರಿ ಮುಖಂಡರಿಗೆ ತಿಳಿಸಲಾಗಿದೆ ಎಂದು ಯುವ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ಒಟ್ಟಾರೆ ತಾಲೂಕು ಬಿಜೆಪಿಯಲ್ಲಿ ಭಿನ್ನಮತ ಹೊಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೆಲವು ನಿಷ್ಠಾವಂತ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಚರ್ಚೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

