ಮಾದರ ಚೆನ್ನಯ್ಯ ಸಮಿತಿ ಬೆಂಬಲ
ಸೇಡಂ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮಾದರ ಚೆನ್ನಯ್ಯ ಜನಜಾಗೃತಿ ರಾಜ್ಯ ಸಮಿತಿ ನಿರ್ಧರಿಸಿದೆ ಎಂದು ಅದರ ರಾಜ್ಯಾಧ್ಯಕ್ಷ ಎಂ.ಜಿ. ಶ್ರೀಶೈಲ್ ತಿಳಿಸಿದ್ದಾರೆ. ಗುಲ್ಬರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಸರ್ವ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸದಾಶಿವ ಆಯೋಗದ ವರದಿ ಬಗ್ಗೆ ಸಚಿವ ಎಚ್. ಆಂಜನೇಯ ಮುಖಾಂತರ ಚರ್ಚೆ ಮಾಡಿ ಸೂಕ್ತ ಸಲಹೆಗಳೊಂದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲಿಸಲು ಒಮ್ಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಾದಿಗ ಸಮಾಜದ ಜನತೆಗೆ ಜಿಪಂ, ತಾಪಂ ಹಾಗೂ ಇತರ ಕ್ಷೇತ್ರಗಳಲ್ಲಿ ಟಿಕೆಟ್ ನೀಡಲು ಒತ್ತಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಗುಲ್ಬರ್ಗ(ಉ) ವಿಧಾನಸಭೆ ಮತಕ್ಷೇತ್ರ ಸಭೆ: ಗುಲ್ಬರ್ಗ: ಇತ್ತೀಚೆಗೆ ಬರುವ ಲೋಕಸಭೆ ಚುನಾವಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡ ಉತ್ತರ ವಿಧಾನ ಮತಕ್ಷೇತ್ರ ಸಭೆಯಲ್ಲಿ ಕೇಂದ್ರ- ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳನ್ನು ಪ್ರತಿ ಮನೆಗೂ ಪಾದಯಾತ್ರೆ ಮಾಡುವ ಮೂಲಕ ತಿಳಿಸಿ ಬಿರುಸಿನ ಪ್ರಚಾರ ಮಾಡುವಂತೆ ಕಾಂಗ್ರೆಸ್ಸಿನ ಪ್ರತಿ ವಾರ್ಡನವರಿಗೆ ಗುಲ್ಬರ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಸಗರ ಚುಲಬುಲ್ ಮನವಿ ಮಾಡಿದರು. ನಗರದಲ್ಲಿ ಬುಧವಾರ ಕಾಂಗ್ರೆಸ್ ಬ್ಲಾಕ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಅಸದ್ ಅಲಿ ಅನ್ಸಾರಿ, ಯಲ್ಲಪ್ಪ ನಾಯಕುಡಿ, ಸೈಯದ ಅಹ್ಮದ ಇಕ್ಬಲ್, ಶಿವಾಜಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

