ಗುಲ್ಬರ್ಗಾ

ಮತದಾನ ನಿಮ್ಮ ಹಕ್ಕು, ಚಲಾಯಿಸಿ: ಕುಮಾರ್

Published On :

ಗುಲ್ಬರ್ಗ: ಪ್ರಜಾಪ್ರಭುತ್ವವನ್ನು ಬಲಿಷ್ಠಪಡಿಸಲು ಹಾಗೂ ಸದೃಢಗೊಳಿಸಲು ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ ಮತ್ತು ಯುವ ಸಮುದಾಯ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಡ್ಡಾಯ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯ್ತಿ ಸಿಇಒ ಹಾಗೂ ಸ್ವೀಪ್ ಕಾರ್ಯಕ್ರಮದ ಅಧ್ಯಕ್ಷ ಟಿ.ಹೆಚ್.ಎಂ. ಕುಮಾರ್ ಕರೆ ನೀಡಿದರು.
 ಗುಲ್ಬರ್ಗ ನಗರದ ವಿವಿಧ ಪದವಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸಮುದಾಯಕ್ಕಾಗಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 ಸಂವಿಧಾನಾತ್ಮಕ ಮತದಾನದ ಹಕ್ಕು ಚಲಾಯಿಸುವುದು ಅತ್ಯಂತ ಪವಿತ್ರ ಹಕ್ಕು ಮತ್ತು ಕರ್ತವ್ಯವಾಗಿದೆ. ಯಾವುದೇ ಕಾರಣಕ್ಕೂ ಮತದಾನದ ಹಕ್ಕನ್ನು ಕಳೆದುಕೊಳ್ಳದೆ ತಪ್ಪದೆ ಮತದಾನ ಮಾಡಬೇಕು. ಎಷ್ಟೇ ಕೆಲಸಗಳಿದ್ದರೂ ಅವುಗಳನ್ನು ಬದಿಗಿಟ್ಟು ಈ ಬಾರಿ ಏಪ್ರಿಲ್ 17 ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಜರುಗುವ ಚುನಾವಣೆಯಲ್ಲಿ ಮತ ಚಲಾಯಿಸಬೇಕೆಂದು ಹೇಳಿದರು. ಕಾಲೇಜಿನ ಪ್ರಿನ್ಸಿಪಾಲ್ ಖಂಡೇರಾವ್, ಫರಹತಾಬಾದ್ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮಾಣಿಕರಾವ್ ಕುಲ್ಕರ್ಣಿ, ಅರ್ಚನಾ ಪಾಟೀಲ್ ಮತ್ತು ರೂಪಾಲಿ ರಾಠೋಡ್, ಪ್ರಿನ್ಸಿಪಾಲ್ ಬಸವರಾಜ ಕುನ್ನೂರ್, ಪ್ರಿನ್ಸಿಪಾಲ್ ಎ.ಡಿ. ಶೇರಿಕಾರ್ ಪಾಲ್ಗೊಂಡಿದ್ದರು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಆರ್.ಪಿ. ಶಂಕರ್, ಎಂ. ರಾಧಕೃಷ್ಣ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅರ್ಚನಾ ಎಸ್.ಎಂ, ವಾರ್ತಾಧಿಕಾರಿ ಜಿ. ಚಂದ್ರಕಾಂತ್ ಭಾಗವಹಿಸಿದ್ದರು. ಕಾರ್ಯಕ್ರಮಗಳ ಕೊನೆಯಲ್ಲಿ ಈ ಕಾಲೇಜುಗಳ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಡ್ಡಾಯ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.