ಯಾರ್ಯಾರು ಚುನಾವಣಾ ಏಜೆಂಟರಾಗುವಂತಿಲ್ಲ?
ಗುಲ್ಬರ್ಗ: ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಪರವಾಗಿ ಸಚಿವರು, ಸಂಸದರು ಹಾಗೂ ಶಾಸಕರನ್ನು ಚುನಾವಣಾ ಏಜೆಂಟ್ರನ್ನಾಗಿ ನೇಮಕ ಮಾಡಿಕೊಳ್ಳುವುದನ್ನು ಚುನಾವಣಾ ಆಯೋಗ ನಿಷೇಧಿಸಿ ಆದೇಶ ಹೊರಡಿಸಿದೆ. ಇವರಲ್ಲದೇ ಮಹಾನಗರ ಪಾಲಿಕೆಗಳ ಮೇಯರ್ಗಳು, ಮುನಿಸಿಪಾಲಿಟಿ ಹಾಗೂ ಜಿಲ್ಲಾ ಪಂಚಾಯತ್ಗಳ ಅಧ್ಯಕ್ಷರುಗಳು ಚುನಾವಣೆಯಲ್ಲಿ ಭಾಗವಹಿಸಿ ಮತಗಟ್ಟೆ ಏಜೆಂಟರಾಗುವುದು ಸಲ್ಲದು. ಇಂತಹವರು ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಸ್ಪಷ್ಟಡಿಸಿದೆ. ರಾಜ್ಯಸಭಾ ಸದಸ್ಯರು ಹಾಗೂ ಶಾಸಕರು ಚುನಾವಣಾ ಏಜೆಂಟ್ರಾಗಲು ಸಾಧ್ಯವೇ ಎಂದು ಪುದುಚೇರಿಯ ಚುನಾವಣಾ ಅಧಿಕಾರಿಗಳು ಆಯೋಗವನ್ನು ಕೇಳಿರುವ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ಈ ಆದೇಶ ಹೊರಡಿಸಿದೆ.
786 ಲೀ. ಮದ್ಯ ವಶ: ಅಬಕಾರಿ ಮತ್ತು ಪೊಲೀಸ್ ಇಲಾಖೆಗಳಿಂದ ಏಪ್ರಿಲ್ 3 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಒಟ್ಟು 73 ಪ್ರಕರಣಗಳನ್ನು ದಾಖಲಿಸಲಾಗಿದ್ದು, 786.82 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

