ಗುಲ್ಬರ್ಗಾ

ಹಕ್ಕು ಚಲಾಯಿಸಿ, ಪ್ರಗತಿಗೆ ಸಹಕರಿಸಿ

Published On :

ಹುಣಸಗಿ: ಜಗತ್ತಿನಲ್ಲಿ ಅತಿದೊಡ್ಡ ಪ್ರಜಾಸತ್ತೆ ನಮ್ಮ ದೇಶವಾಗಿದೆ. ಆದ್ದರಿಂದ ಹದಿನೆಂಟು ವಯಸ್ಸಿನ ಎಲ್ಲ ಮತದಾರರು ಮತದಾನ ಮಾಡಿ ದೇಶ ಪ್ರಗತಿಗೆ ಸಹಕರಿಸಿ ಎಂದು ಪಿಡಿಓ ಶಿವಕುಮಾರ ಚೌದ್ರಿ ಹೇಳಿದರು.
 ಸಮೀಪದ ವಜ್ಜಲ್ ಗ್ರಾಮ ಪಂಚಾಯತಿಯಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 18 ವಯಸ್ಸು ತುಂಬಿದ ಎಲ್ಲ ಮತದಾರರು ನಿಮ್ಮ ನಡೆ ಮತಗಟ್ಟೆ ಕಡೆ ಎಂಬ ಧ್ಯೇಯದೊಂದಿಗೆ ಮತಗಟ್ಟಗೆ ಆಗಮಿಸಿ ಮತ ಚಲಾಯಿಸಿ ಎಂದು ಜನರಿಗೆ ತಿಳಿವಳಿಕೆ ನೀಡಲಾಯಿತು.  ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥಪೂರ್ಣವಾಗುವುದಕ್ಕೆ ಜನತೆಯ ಸಹಭಾಗಿತ್ವ ಮಹತ್ವದ್ದಾಗಿದೆ ಎಂದು ಹೇಳಿದರು. ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ಪರವಾಗಿ ಸಂಸತ್ತಿನಲ್ಲಿ ಶಾಸನ ರಚನೆಯ ಪ್ರಮುಖ ಕರ್ತವ್ಯ ನಿರ್ವಹಿಸುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.