ಗುಲ್ಬರ್ಗಾ

ದೈಹಿಕ, ಮಾನಸಿಕವಾಗಿ ಸದೃಢರಾಗಿ: ಸಿಇಒ

Published On :

ಯಾದಗಿರಿ: ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಎಲ್ಲರೂ ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಕರೆ ನೀಡಿದರು.
ನಗರದ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ, ಕೀಟಜನ್ಯ ರೋಗಗಳಿಂದ ಆರೋಗ್ಯ ರಕ್ಷಣೆ ಮಾಡುವದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಅದರಂತೆ ಸದೃಢ ದೇಹಕ್ಕಾಗಿ ಮಾನಸಿಕವಾಗಿ ಸದೃಢರಾಗುವುದು ಅಷ್ಟೇ ಮುಖ್ಯವಾಗಿದೆ ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಅವರು ಯುವ ಜನಾಂಗ ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸದೃಢ ಭಾರತ ನಿರ್ಮಾಣದಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಳ್ಳಬೇಕೆಂದರು.  ಆರೋಗ್ಯ ಶಿಕ್ಷಣಾಧಿಕಾರಿ ಸಿದ್ದರಾಮ ಹೊನಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಲೇರಿಯ ಅಧಿಕಾರಿ ಸೂರ್ಯಪ್ರಕಾಶ ಕಂದಕೂರ, ಕೀಟಜನ್ಯ ರೋಗಗಳು ಮತ್ತು ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸುಭಾಶ ಕೌಲಗಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.