ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ
ಯಾದಗಿರಿ: ನಗರದ ವಿವಿಧ ವಾರ್ಡ್ಗಳಲ್ಲಿ ಜನತೆ ತೀವ್ರ ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ನಗರಸಭೆ ಗಮನ ಹರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಬೇಕೆಂದು ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕಳೆದ ಎರಡು ವರ್ಷಗಳಿಂದ ಜನತೆ ನೀರಿನ ಸಮಸ್ಯೆ ಎದುರಿಸುತ್ತಿದ್ದು, ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದೆ. ಇದು ಜನರ ಸಮಸ್ಯೆ ಪರಿಹಾರ ಸಿಕ್ಕಿಲ್ಲ ಕೂಡಲೇ ವಾರ್ಡ್ಗಳಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಬೇಕು. ಆಗ ಮಾತ್ರ ಜನರಿಗೆ ಹೆಚ್ಚಿನ ಅನುಕೂಲತೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಖಾಜಾ ಮೈನೋದ್ದಿನ್, ನರಸು ಬುಡಯ್ಯನೋರ್, ಮಲ್ಲೇಶ ನಾಯಕ, ರಂಗನಾಥ ದೇವದುರ್ಗ, ಲಕ್ಷ್ಮಣ ಕಣೇಕಲ್, ಶಿವರಾಜ ನಕ್ಕಲ್, ಶಿವಕುಮಾರ ಪಾಟೀಲ್, ವಿನಾಯಕ ದಾಸನ್, ಶಿವಾನಂದಪ್ಪ ಪರಶುನಾಯಕ, ರಾಹುಲ್ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

