ಬಿಜೆಪಿ ಗೆಲವು ಖಚಿತ: ನರಿಬೋಳ
ಜೇವರ್ಗಿ: ಜೇವರ್ಗಿ ಮತಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಅಭಿವೃದ್ಧಿ ಕಾರ್ಯ ಮಾಡಿದ್ದು ಬಿಜೆಪಿ ಸರ್ಕಾರ. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂಸಿಂಗ್ ಉನ್ನತ ಸಚಿವ ಸ್ಥಾನಗಳನ್ನು ಹೊಂದಿದ್ದರೂ ಈ ಭಾಗದ ಅಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದೆರಡು ದಿನಗಳ ಹಿಂದೆ ಜೇವರ್ಗಿಯಲ್ಲಿ ಪ್ರಚಾರ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲವೆಂದು ಹೇಳಿದ್ದರು. ಆದರೆ ನರೇಂದ್ರ ಮೋದಿ ಅವರು ಕಳೆದ 13 ವರ್ಷಗಳಿಂದ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ನಂ.1 ಸ್ಥಾನಕ್ಕೆ ತಂದಿದ್ದಾರೆ ಎಂದು ಕೇಂದ್ರದಲ್ಲಿನ ಯುಪಿಎ ಸರ್ಕಾರವೇ ಪ್ರಮಾಣ ಪತ್ರ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 9 ತಿಂಗಳಿಂದ ರಾಜ್ಯದ ಜನತೆಗೆ ಸುಳ್ಳು ಭರವಸೆ ನೀಡುತ್ತ, ಯೋಜನೆಗಳನ್ನು ಜಾರಿಗೆ ತರುವುದು ಮತ್ತೆ ಹಿಂಪಡೆಯುವಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಮಾಲಗತ್ತಿ: ಮೃತರ ಕುಟುಂಬಕ್ಕೆ ಬೆಳಮಗಿ ಸಾಂತ್ವನ
ಶಹಾಬಾದ್: ಜೇವರ್ಗಿಯಲ್ಲಿ ಶುಕ್ರವಾರ ಟಂಟಂ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದ ಶಿವಮ್ಮ ಹಿಡ್ಡಿನಮನಿ ಹಾಗೂ ಪವನ ಮನೆಗೆ ಮಾಜಿ ಸಚಿವ ರೇವುನಾಯಕ ಬೆಳಮಗಿ ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಮಾಲಗತ್ತಿ ಗ್ರಾಮದ ಮೃತಪಟ್ಟ ಇಬ್ಬರ ಮನೆಗೆ ಹೋದಾಗ ಕುಟುಂಬದವರ ಹಾಗೂ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟುವಂತಿತ್ತು. ಆ ಆಕ್ರಂದನ ಮಧ್ಯದಲ್ಲಿಯೇ ಮಾಜಿ ಸಚಿವ ಬೆಳಮಗಿ ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿ ನಂತರ ಚುನಾವಣಾ ಪ್ರಚಾರಕ್ಕೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

