ಮೋದಿಯಿಂದ ಮಾತ್ರ ದೇಶ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಯಾದಗಿರಿ ಏ.8
ನರೇಂದ್ರ ಮೋದಿ ಅವರಿಂದ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ದೇಶದಲ್ಲಿ ನರೇಂದ್ರ ಮೋದಿಯವರ ಗಾಳಿ ಬೀಸುತ್ತಿದ್ದು, ಯುವ ಜನಾಂಗ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ಬಿಜೆಪಿ ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಿವನ ಗೌಡ ನಾಯಕ ಹೇಳಿದರು.
ಮಂಗಳವಾರ ಇಲ್ಲಿನ ಮೈಲಾಪುರ ಬೇಸ್ನಿಂದ ಗಾಂಧಿವೃತ್ತದವರೆಗೆ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿದ ಸಾಧನೆಗಳು ನಮಗೆ ಈ ಚುನಾವಣೆಯಲ್ಲಿ ಶ್ರೀರಕ್ಷೆಯಾಗಿವೆ. ಮತ ಕ್ಷೇತ್ರದಾದ್ಯಂತ ಬಿಜೆಪಿಗೆ ಉತ್ತಮ ವಾತಾವರಣ ವ್ಯಕ್ತವಾಗುತ್ತಿದ್ದು, ಜನತೆ ನಮ್ಮ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಭಾವಿ ಪ್ರಧಾನಿ: ಗುಜರಾತ್ ರಾಜ್ಯವನ್ನು ಅಭಿವೃದ್ಧಿಗೊಳಿಸಿರುವ ನರೇಂದ್ರ ಮೋದಿ, ಈ ದೇಶದ ಪ್ರಧಾನಿಯಾದಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಪ್ರತಿಯೊಬ್ಬ ಮತದಾರರ ಮನದಲ್ಲಿದೆ. ಯುಪಿಎ ಸರ್ಕಾರದಲ್ಲಿನ ಹಗರಣಗಳಿಂದ ಜನತೆ ಬೇಸತ್ತಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಡಾ. ವೀರಬಸವಂತ ರಡ್ಡಿ ಮುದ್ನಾಳ ಮಾತನಾಡಿ, ಸುಭದ್ರ ದೇಶ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ವಿಜ್ಞಾನ, ತಂತ್ರಜ್ಞಾನ, ಮೂಲ ಸೌಕರ್ಯಗಳ ಅಭಿವೃದ್ಧಿ, ಹಲವು ನದಿಗಳ ಜೋಡಣೆ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳನ್ನು ಪೂರೈಸಬೇಕು. ಆ ಮೂಲಕ ಭಾರತವನ್ನು ಅಭಿವೃದ್ಧಿಶೀಲರಾಷ್ಟ್ರದ ನಿರ್ಮಾಣದ ಕನಸನ್ನು ಮೋದಿ ಅವರು ಇಟ್ಟಿಕೊಂಡಿದ್ದಾರೆ. ಇದ್ದರಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವನಗೌಡ ನಾಯಕರನ್ನು ಗೆಲ್ಲಿಸಿ, ಮೋದಿ ಅವರ ಶಕ್ತಿ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ವೀರಣಗೌಡ ಮಲ್ಲಾಬಾದಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಮಾಗನೂರ, ದೇವರಾಜ ನಾಯಕ, ಗೋಪಾಲ ದಾಸನಕೇರಾ, ದೇವಿಂದ್ರನಾಥ ನಾದ್ ಡಾ.ಶಫಿ ತುನ್ನೂರ, ಲಿಂಗಪ್ಪ ಹತ್ತಿಮನಿ, ಮಲ್ಲಿಕಾರ್ಜುನ ಗುಳೇದ್, ವೆಂಕಟರಡ್ಡಿ ಅಬ್ಬೆತುಮಕೂರ, ಹಣಮಂತ ಇಟಗಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

