ಸುಭದ್ರ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮೋದಿ
ಜೇವರ್ಗಿ: ಸುಭದ್ರ ಹಾಗೂ ಸದೃಢ ರಾಷ್ಟ್ರಕ್ಕಾಗಿ, ದೇಶಾಭಿವೃದ್ಧಿ ಯಾಗಬೇಕಾದರೆ ಮೋದಿ ಪ್ರಧಾನಿಯಾಗುವುದು ಅಗತ್ಯ. ಆ ನಿಟ್ಟಿನಲ್ಲಿ ಗುಲ್ಬರ್ಗ ಲೋಕಸಭಾ ಅಭ್ಯರ್ಥಿ ರೇವುನಾಯಕ ಬೆಳಮಗಿಯನ್ನು ಆಯ್ಕೆ ಮಾಡಲು ಬಿಜೆಪಿ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪಪೂ ಕಾಲೇಜಿನ ಆವರಣದಲ್ಲಿ ಬಿಜೆಪಿ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
20ಕ್ಕೂ ಅಧಿಕ ಸ್ಥಾನಗಳಲ್ಲಿ: ಗುಲ್ಬರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇವುನಾಯಕ ಬೆಳಮಗಿ ಶಾಸಕರಾಗಿ, ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ. ಮೋದಿಯನ್ನು ದೇಶದ ಪ್ರಧಾನಿ ಮಾಡಲು ರಾಜ್ಯದ ಜನತೆ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದ್ದಾರೆಂದು ಅನಂತಕುಮಾರ ಭವಿಷ್ಯ ನುಡಿದರು.
ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅಭ್ಯರ್ಥಿ ರೇವುನಾಯಕ ಬೆಳಮಗಿ, ರಾಯಚೂರ ಕ್ಷೇತ್ರದ ಅಭ್ಯರ್ಥಿ ಶಿವನಗೌಡ ನಾಯಕ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮಾಜಿ ಸಚಿವ ಸುನೀಲ್ ವಲ್ಲ್ಯಾಪುರೆ, ಮಲ್ಲಿನಾಥಗೌಡ ಯಲಗೋಡ ಮಾತನಾಡಿದರು.
ಸಭೆಯಲ್ಲಿ ಶಾಸಕರಾದ ದತ್ತಾತ್ರಯ ಪಾಟೀಲ್ ರೇವೂರ, ಅಮರನಾಥ ಪಾಟೀಲ್, ಮಾಜಿ ಸಚಿವ ಬಾಬುರಾವ ಚವ್ಹಾಣ, ಬಿ.ಜಿ. ಪಾಟೀಲ್, ಶಿವಾನಂದ ಕಲ್ಲೂರ, ವಿದ್ಯಾಸಾಗರ ಕುಲಕರ್ಣಿ, ತ್ರಿವಿಕ್ರಮ ಜೋಶಿ, ದಂಡಪ್ಪ ಸಾಹು ಕುರಳಗೇರಾ, ರಮೇಶಬಾಬು ವಕೀಲ್, ಅಪ್ಪಾಸಾಬ ಪಾಟೀಲ್ ರದ್ದೇವಾಡಗಿ, ಧರ್ಮಣ್ಣ ದೊಡ್ಡಮನಿ, ಪಿ.ಎನ್. ಮಾಲಿಪಾಟೀಲ್, ಸಾಯಬಣ್ಣ ದೊಡ್ಡಮನಿ, ಮುಕುಂದ ದೇಶಪಾಂಡೆ, ಡಾ. ಇಂದಿರಾ ಶಕ್ತಿ, ಭೀಮರಾವ ಗುಜಗೊಂಡ, ಮಲಶೆಟ್ಟೆಪ್ಪಗೌಡ ಹಿರೇಗೌಡ, ಅಕ್ಬರ ಮುಲ್ಲಾ, ಸಂತೋಷ ಮಲ್ಲಾಬಾದ, ಭೀಮರಾವ ಮಡಿವಾಳಕರ್, ರೇವಣಸಿದ್ದಪ್ಪ ಸಂಕಾಲಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು. ಇದೇ ಸಂದರ್ಭದಲ್ಲಿ ಹಲವಾರು ಜನ ಬಿಜೆಪಿಗೆ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

