ಸುಸೂತ್ರ ಮತದಾನಕ್ಕೆ ಸಿದ್ಧತೆ
ಜೇವರ್ಗಿ: ಇದೇ ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಾದ್ಯಂತ ಸುಸೂತ್ರ ಮತದಾನಕ್ಕೆ ಚುನಾವಣಾ ಆಯೋಗದ ಸಹಕಾರದಿಂದ ತಾಲೂಕು ಆಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಹಸೀಲ್ದಾರ್ ಎಂ.ಎನ್. ಚೋರಗಸ್ತಿ ಹೇಳಿದರು.
ತಾಲೂಕಿನ ಚುನಾವಣಾ ಸಿಬ್ಬಂದಿಗಾಗಿ ಭೂತಪುರ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಮತದಾನಕ್ಕಾಗಿ ತಾಲೂಕಿನಲ್ಲಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಚುನಾವಣಾ ಕರ್ತವ್ಯಕ್ಕೆ 1,200 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ ಸೆಕ್ಟರ್ ಅಧಿಕಾರಿಗಳು, ಫ್ಲ್ಲೈಯಿಂಗ್ ಸ್ಕ್ವಾಡ್ಗಳು, ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಏ.16ರಂದು ಚುನಾವಣೆಗೆ ನಿಯೋಜಿಸಿದ ಮತಗಟ್ಟೆ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸಾಮಗ್ರಿಯನ್ನು ಪಡೆದುಕೊಂಡು ಮತಗಟ್ಟೆಗಳಿಗೆ ತೆರಳಬೇಕು. ಚುನಾವಣಾ ಕರ್ತವ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಒದಗಿಸಲಾಗುವುದು. ಮಹಿಳಾ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಲಾಗುವುದು.
ಮತಗಟ್ಟೆಗೆ ತೆರಳುವ ಮುನ್ನ ಸಿಬ್ಬಂದಿಗಳು ಚುನಾವಣಾ ಸಾಮಗ್ರಿಗಳು ಸಮರ್ಪಕವಾಗಿ ತಲುಪಿದ ಬಗ್ಗೆ ಪರಿಶೀಲಿಸುವುದು ಅಗತ್ಯ. ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ 8 ಜನ ಅಭ್ಯರ್ಥಿಗಳು ಕಣದಲ್ಲಿದ್ದು, ಪ್ರತಿ ಅಭ್ಯರ್ಥಿಗೆ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಿಕೊಳ್ಳಬೇಕೆಂದರು.
ಚುನಾವಣೆಯ ಸಂದರ್ಭದಲ್ಲಿ ತಾಲೂಕಿನಾದ್ಯಂತ ಸಂಪೂರ್ಣ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದೆಂದು ತಹಸೀಲ್ದಾರರು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಜಿಯಾವುಲ್ಲಾ. ತಹಸೀಲ್ದಾರ್ ಶರಣಬಸಪ್ಪ ಮುಡಬಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಜರ್ ಹುಸೇನ್, ಚುನಾವಣಾ ವಿಭಾಗದ ಶಿರಸ್ತೇದಾರ್ ಆನಂದ್, ಕಂದಾಯ ನಿರೀಕ್ಷಕ ಕಲ್ಲಪ್ಪಗೌಡ ಕುಕನೂರ, ಟಿಪ್ಪುಸುಲ್ತಾನ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

